ಢಾಕಾ : ಬಾಂಗ್ಲಾದೇಶದಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ವೇಗವಾಗಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 17 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ ಮದರಿಪುರದಲ್ಲಿ ಈ ಘಟನೆ ನಡೆದಿದೆ. ಬಸ್ ಅಮದ್ ಪರಿವಾಹನ್’ಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಿಗ್ಗೆ 7.30ರ ಸುಮಾರಿಗೆ ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ವೇನಲ್ಲಿ ಕಮರಿಗೆ ಬಿದ್ದಿದೆ. ಈ ಅಪಘಾತದಲ್ಲಿ ಈವರೆಗೆ 17 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಅಪಘಾತವು ಎಷ್ಟು ಭಯಾನಕವಾಗಿದೆಯೆಂದರೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು.
ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಮದರಿಪುರ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಸೂದ್ ಆಲಂ ತಿಳಿಸಿದ್ದಾರೆ. “ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮತ್ತು ಬಸ್ನಲ್ಲಿನ ಯಾಂತ್ರಿಕ ದೋಷದಿಂದಾಗಿ ಅಪಘಾತ ಸಂಭವಿಸಿದೆ ಎಂದು ತೋರುತ್ತದೆ. ಇದು ಪ್ರಸ್ತುತ ತನಿಖೆಯಲ್ಲಿದೆ”.
ವೇಗವಾಗಿ ಚಲಿಸುತ್ತಿದ್ದ ಬಸ್’ನ ಚಕ್ರ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದಿದೆ ಎಂದು ಫರೀದ್ ಪುರದ ಅಗ್ನಿಶಾಮಕ ಸೇವೆಯ ಉಪ ಸಹಾಯಕ ನಿರ್ದೇಶಕ ಶಿಪ್ಲು ಅಹ್ಮದ್ ತಿಳಿಸಿದ್ದಾರೆ. ಅಗ್ನಿಶಾಮಕ ಸೇವೆಯ ಮೂರು ಘಟಕಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನ ನಡೆಸುತ್ತಿವೆ.
BIGG NEWS : ಐಸಿಸಿ ಬಂಧನ ವಾರಂಟ್ ಬಳಿಕ ರಷ್ಯಾ ಆಕ್ರಮಿತ ಮಾರಿಯುಪೋಲ್, ಕ್ರೈಮಿಯಾಗೆ ‘ಪುಟಿನ್’ ಭೇಟಿ