ಬೆಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಗೆ ನುಗ್ಗಿ ಪಿಎಸ್ಐಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ, ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು 40 ಮಂದಿ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಬೆಳ್ತಂಗಡಿ ಠಾಣೆಗೆ ಅಕ್ರಮವಾಗಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂಬುದಾಗಿ ಆರೋಪಿಸಿ ಪಿಎಸ್ಐಗೆ ಧಮ್ಕಿ ಹಾಕಿದ್ದರು. ಈ ಸಂಬಂಧ ಶಾಸಕ ಹರೀಶ್ ಪೂಂಜಾ ಸೇರಿದಂತೆ 40 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ಬೆಳ್ತಂಗಡಿ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಶಾಸಕ ಹರೀಶ್ ಪೂಂಜಾ ಸೇರಿದಂತೆ 40 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
BREAKING: ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ SIT ಅರ್ಜಿ ಸಲ್ಲಿಕೆ
BREAKING: ದೆಹಲಿ ಗಲಭೆ ಪ್ರಕರಣ: ‘ಉಮರ್ ಖಾಲಿದ್’ಗೆ ಜಾಮೀನು ನಿರಾಕರಿಸಿದ ಕೋರ್ಟ್ | Delhi Riots conspiracy case