ಮಂಗಳೂರು : ಕಳೆದ ವರ್ಷ ಹಿಜಾಬ್ ಸೇರಿದಂತೆ ಹಿಂದೂ ದೇವರುಗಳ ಜಾತ್ರಾ ಸಂದರ್ಭಗಳಲ್ಲಿ ಅನ್ಯ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಹಿಂದೂ ಕಾರ್ಯಕರ್ತರು ಹಾಗೂ ಹಿಂದೂ ವ್ಯಾಪಾರಸ್ಥರು ಅನ್ಯಮತೀಯದವರಿಗೆ ವ್ಯಾಪಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮಂಗಳೂರಿನಲ್ಲಿ ಮತ್ತೆ ಅನ್ಯಮತಿಯ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದೆ.
UPSC Nursing Officer Recruitment 2024 : 1930 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನದಲ್ಲಿ ಮತ್ತೆ ವ್ಯಾಪಾರ ಧರ್ಮ ದಂಗಲ್ ಕಂಡು ಬಂದಿದೆ. ಅನ್ಯಮತೀಯರಿಗೆ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘವು ದೇವಸ್ಥಾನದ ಆಡಳಿತ ಮಂಡಳಿಗೆ ಆಗ್ರಹಿಸಿದೆ. ಮುಲ್ಕಿಯಲ್ಲಿ ನಡೆಯಲಿರುವ ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂಬ ಕೂಗು ಕೇಳಿ ಬಂದಿದೆ.
KPSC Recruitment 2024 : 70 ಮೋಟಾರು ವಾಹನ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬಪ್ಪನಾಡುವಿನ ವ್ಯಾಪಾರ ಧರ್ಮ ದಂಗಲ್ ಕಳೆದ ವರ್ಷ ಬ್ಯಾನರ್ ಮೂಲಕ ಸದ್ದು ಮಾಡಿತ್ತು. ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಜಯರಾಮ್ ಶೆಟ್ಟಿಗಾರ್ ಎಂಬುವವರು ದೇವಸ್ಥಾನದ 150 ಮೀ ವ್ಯಾಪ್ತಿಯೊಳಗೆ ಅನ್ಯಮತೀಯ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಹಾಗೂ ದೇವಸ್ಥಾನದ ವಠಾರದಲ್ಲಿ ಹಿಂದುಗಳೇ ವ್ಯಾಪಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ.