ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಹೇಳಿಕೆ ಪ್ರಕರಣದಲ್ಲಿ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಇಂದು ಎಸ್ಐಟಿ ವಶಕ್ಕೆ ನೀಡಿದ್ದಂತ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಳ್ತಂಗಡಿಯ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಹೀಗಾಗಿ ಅವರನ್ನು ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.