ಬೀದರ್ : ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ SITಗೆ ಕೆಲವೆಡೆ ಮಾನವರ ಅಸ್ಥಿ ಸಿಕ್ಕಿದ್ದು, ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೀದರ್ ನಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ, ಬೇಜವಾಬ್ದಾರಿತನ, ನಿರ್ಲಕ್ಷ್ಯ ತೋರಿದ ಅರಣ್ಯ ಅಧಿಕಾರಿ, ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!
ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ