ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು.
ಧರ್ಮಸ್ಥಳದ ಬಗ್ಗೆ ಬಹಳಷ್ಟು ಭಕ್ತರು ನಂಬಿಕೆ ಇಟ್ಟುಕೊಂಡಿದ್ದಾರೆ. ಇದನ್ನು ನಾವು ಕೂಡ ನೋಡಿದ್ದೇವೆ. ನಾವು ಆ ಕ್ಷೇತ್ರದ ಮೇಲೆ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೂ ಅಪಾರವಾದಂತ ಗೌರವವಿದೆ ಎಂದರು.
ಸರ್ಕಾರ ಸಹ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೆಲಸವನ್ನು ಮಾಡಬಾರದು. ಅದನ್ನು ನಮ್ಮ ಸರ್ಕಾರ ಎಂದಿಗೂ ಮಾಡುವುದಿಲ್ಲ. ಏಕೆಂದರೇ ಈ ಹಿಂದೆ ಸಿಗಂದೂರು ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸೋದಕ್ಕೆ ಹಿಂದಿನ ಸರ್ಕಾರ ಮಾಡಿತ್ತು. ಬಿಜೆಪಿಯ ಸಂಸದರು, ಶಾಸಕರು ಸೇರಿಕೊಂಡು ಮಾಡಿದ್ದರು. ಆದರೇ ನಾವು ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಮಾಡಬಾರದು ಕೂಡ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
BIG NEWS: ಮೋದಿ ಕಳ್ಳ ಮತದಾನದಿಂದಲೇ ಗೆದ್ದಿರೋದು: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು
BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು
BREAKING: ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ 11 ಕುಸ್ತಿಪಟುಗಳನ್ನು ಅಮಾನತುಗೊಳಿಸಿದ WFI