ಬೆಂಗಳೂರು: ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ.
ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು.
ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನು ಒಳದೊಂಡಂತ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.
ಈ ಅರ್ಜಿಯನ್ನು ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು ದಿನಾಂಕ 8-7-2025ರಂದು ವಿಚಾರಣಾಧೀನ ನ್ಯಾಯಾಲಯವು ಮಾಡಿರುವ ಆಕ್ಷೇಪಾರ್ಹವಾದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ರದ್ದುಪಡಿಸಿದೆ. ಇದಲ್ಲದೇ ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಿದೆ.
ಇನ್ನೂ ವಿಚಾರಣಾಧೀನ ನ್ಯಾಯಾಲಯವು ಈ ಆದೇಶವನ್ನು ಮಾಡಿರುವ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯವು ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು ಎಂಬುದಾಗಿ ತೀರ್ಪಿನಲ್ಲಿ ಉಲ್ಲೇಖಿಸಿ ಆದೇಶಿಸಿದೆ.
ಇದೇ ಸಂದರ್ಭದಲ್ಲಿ ಸಿವಿಲ್ ದಾವೆ, ಕ್ರಿಮಿನಲ್ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲಾ ವಾದಗಳನ್ನು ಮುಕ್ತವಾಗಿ ಇರಿಸಲಾಗಿದೆ ಎಂಬುದಾಗಿ ಹೈಕೋರ್ಟ್ ತಿಳಿಸಿದೆ.
ಕರ್ತವ್ಯ ಲೋಪವೆಸಗಿದವರಿಗೆ ಬಿಬಿಎಂಪಿ ಶಾಕ್: ಮೂವರು ಸಿಬ್ಬಂದಿ ಕರ್ತವ್ಯದಿಂದ ಬಿಡುಗಡೆ
ರಾಜ್ಯ ಸರ್ಕಾರದಿಂದ ‘CET, NEET, JEE ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್