ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆಯನ್ನು ಎಸ್ಐಟಿ ನಡೆಸುತ್ತಿದೆ. ಇಂತಹ ಎಸ್ಐಟಿಗೆ ಪೊಲೀಸ್ ಠಾಣೆ ಎಂಬುದಾಗಿ ಸರ್ಕಾರ ಘೋಷಿಸಿದೆ. ಈ ಮೂಲಕ ಎಸ್ಐಟಿಗೆ ಪೊಲೀಸ್ ಠಾಣೆಯ ಮಾನ್ಯತೆಯನ್ನು ನೀಡಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಧರ್ಮಸ್ಥಳದಲ್ಲೇ ಬೀಡು ಬಿಟ್ಟಿರುವಂತ ಎಸ್ಐಟಿ ತಂಡವು ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಎಸ್ಐಟಿಗೆ ಪೊಲೀಸ್ ಠಾಣೆ ಘೋಷಿಸಿದೆ. ಅಲ್ಲದೇ ಎಸ್ಐಟಿಗೆ ಪೊಲೀಸ್ ಠಾಣೆಯ ಮಾನ್ಯತೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದಲ್ಲದೇ ವಿಶೇಷ ತನಿಖಾ ತಂಡಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಅಧಿಕಾರವನ್ನು ಬಿಎನ್ಎಸ್ಎಸ್ ಅಡಿಯಲ್ಲಿ ನೀಡಿದೆ.
ಕರ್ನಾಟಕದಲ್ಲಿ ‘ಒಂದೇ ಶಿಕ್ಷಣ ನೀತಿ’: ಸಿಎಂ ಸಿದ್ಧರಾಮಯ್ಯಗೆ ಈ ಶಿಫಾರಸ್ಸುಗಳ ವರದಿ ಸಲ್ಲಿಸಿದ ಆಯೋಗ