ದಾವಣಗೆರೆ : ಧರ್ಮಸ್ಥಳದ ಅರಣ್ಯದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ SIT ಅಧಿಕಾರಿಗಳು ತನಿಖೆಯನ್ನು ಚುರುಕುಗೋಳಿಸಿದ್ದಾರೆ. ಇದಿ ಈ ಒಂದು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿತೂರಿ ಮಾಡುವವರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜನಪರ ಕೆಲಸ ಮಾಡುತ್ತ ಬಂದಿದ್ದಾರೆ. ಸರ್ಕಾರ ಮಾಡುವ ಕೆಲಸ ಸ್ವಹಿತಾಸಕ್ತಿಯಿಂದ ಮಾಡುತ್ತಿದ್ದಾರೆ. ರೈತರಿಗೆ, ಬಡವರಿಗೆ, ಮಹಿಳೆಯರಿಗೆ ನೆರವಾಗುವ ಕಾರ್ಯಕ್ರಮ. ಆದ್ರೆ ಇಂದಿನ ವ್ಯವಸ್ಥೆಯಲ್ಲಿ ಇದು ದುಃಖಕರ ವಿಷಯ. ಯಾರ್ಯಾರು ಆರೋಪ ಮಾಡಿದ್ರು ಆ ಬಗ್ಗೆ SIT ತನಿಖೆ ನಡೀತಿದೆ. ಆದ್ರೆ ಆರೋಪ ಮಾಡುವವರಿಗೆ ಇಂತಹ ಮನಸ್ಥಿತಿ ಏಕೆ ಬಂತು ಗೊತ್ತಿಲ್ಲ ಎಂದರು.
ಹೆಣ್ಣುಮಕ್ಕಳು ಸ್ವಾವಲಂಬನೆಯಿಂದ ನೆಮ್ಮದಿ ಬದುಕು ಕಟ್ಟಿಕೊಳ್ಳಬೇಕು ಎಂಬ ಧ್ಯೇಯ ಇಟ್ಟುಕೊಂಡವರು ವೀರೇಂದ್ರ ಹೆಗ್ಗಡೆ. ಅವರ ಮನೆಯೊಳಗೆ ಈ ರೀತಿ ನಡೆಯುತ್ತೆ ಅಂದ್ರೆ ನಮಗೂ ನಂಬಕ್ಕಾಗಲ್ಲ. ಆದರೂ ಸಹ ಎಸ್ಐಟಿ ತನಿಖೆ ನಡೆಯುತ್ತಿದೆ. ಆರೋಪ ಮಾಡಿದವರು ತೋರಿಸಿದ ಜಾಗದಲ್ಲಿ ಏನು ಸಿಕ್ಕಿಲ್ಲ ಎಂದರು.
ಇದರ ಹಿಂದೆ ಏನೋ ಪಿತೂರಿ ಇದೆ ಅಂತಾ ಗೊತ್ತಾಗುತ್ತಿದೆ. ದಯಮಾಡಿ ಸರ್ಕಾರ ಈ ಬಗ್ಗೆ ಪರಿಶೀಲನೆ ಮಾಡಬೇಕು. ಧರ್ಮಸ್ಥಳ ರಾಜ್ಯದ ಧಾರ್ಮಿಕ ಶಕ್ತಿ ಕೇಂದ್ರವಾಗಿದೆ. ಪಿತೂರಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿವಗಂಗಾ ಬಸವರಾಜ ಒತ್ತಾಯ ಮಾಡಿದರು.