ಚಿತ್ರದುರ್ಗ : ಮುರುಘಾ ಮಠಕ್ಕೆ (Murugha Matt) ನೇಮಕ ಮಾಡಲಾಗಿರುವ ಆಡಳಿತಾಧಿಕಾರಿ ಆದೇಶವನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಸವಪ್ರಭು ಶ್ರೀಗಳು ಮನವಿ ಮಾಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಬಸವಪ್ರಭು ಶ್ರೀಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೈ ಮುಗಿದು ಮನವಿ ಮಾಡುತ್ತೇನೆ, ಮುರುಘಾ ಮಠಕ್ಕೆ ನೇಮಕ ಮಾಡಲಾಗಿರುವ ಆಡಳಿತಾಧಿಕಾರಿ ಆದೇಶವನ್ನು ವಾಪಸ್ ಪಡೆಯಿರಿ ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನೇಮಕ ಮಾಡಿರುವ ಆಡಳಿತಾಧಿಕಾರಿ ನಿಯೋಜನೆ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಡಿ.26ರಂದು ಮಠಾಧೀಶರಿಂದ ಧರಣಿಯನ್ನು ಮಾಡಲು ನಿರ್ಧರಿಸಲಾಗಿದೆ ಎಂದು ಎಚ್ಚರಿಕೆ ನೀಡಿದರು. ಮುರುಘಾಮಠಕ್ಕೆ ( Murugha Matt ) ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿತ್ತು.ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಲಾಗಿತ್ತು. ಈ ನೇಮಕ ಪ್ರಶ್ನಿಸಿ ಚಿತ್ರದುರ್ಗದ ಡಿಎಸ್ ಮಲ್ಲಿಕಾರ್ಜುನ ಮತ್ತಿತ್ತರರು ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ರಿಟ್ ಅರ್ಜಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ ರದ್ದುಪಡಿಸಬೇಕು. ಈಗಾಗಲೇ ಡಾ.ಶಿವಮೂರ್ತಿ ಮುರುಘಾ ಶರಣರು ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮೀಜಿಗೆ ಜಿಪಿಎ ನೀಡಲಾಗಿದೆ ಎಂದಿದ್ದಾರೆ.ಇನ್ನೂ ಮಠಾಧಿಪತಿ ಜೈಲಿನಲ್ಲಿರುವುದನ್ನು ಕಾರಣವಾಗಿ ಆಡಳಿತಾಧಿಕಾರಿ ನೇಮಿಸುವುದು ಸಕಾರಣವಲ್ಲ. ಹೀಗಾಗಿ ರಾಜ್ಯ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸುವಂತೆ ಕೋರಿದ್ದರು.
ಈಶ್ವರಪ್ಪ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್’ ನಡೆಸುತ್ತಿದೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ
BIGG NEWS : ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಾಲಿನ 339 ಕೋಟಿ ಬಾಕಿ ಪ್ರೋತ್ಸಾಹಧನ ಬ್ಯಾಂಕ್ ಖಾತೆಗೆ ಜಮಾ