ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಮೈಸೂರಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ.
ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ ಬಿಸಿನೀರಿನ ಪಾತ್ರೆಗೆ ಬಿದ್ದಿದ್ದಾಳೆ. ತಾಯಿ ಬಿಸಿ ನೀರಿನ ಪಾತ್ರೆಗೆ ಬಿದ್ದ ವೇದಾಳನ್ನು ರಕ್ಷಿಸಿ ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಇದೀಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
KSRTC ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ: ಸಾಧಕರಿಗೆ ಸನ್ಮಾನ








