ಹಾವೇರಿ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಈ ವರ್ಷದ ಕೃಷಿ ಮೇಳದ ಅಂಗವಾಗಿ “ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ, ಶ್ರೇಷ್ಠ ಕೃಷಿ ಮಹಿಳೆ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಯುವ ಕೃಷಿಕ ಹಾಗೂ ಶ್ರೇಷ್ಠ ಯುವ ಕೃಷಿ ಮಹಿಳೆ” ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಹಾಗೂ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಹಾವೇರಿ ಜಿಲ್ಲೆಯ ರೈತ ಹಾಗೂ ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಸೆ.1 ರಿಂದ 20ರವರೆಗೆ ಹಾವೇರಿ ನಗರದಲ್ಲಿ ಅಗ್ನಿಪಥ್ ನೇಮಕಾತಿ Rally

ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಹಾಗೂ ಕೃಷಿ ಮಹಿಳೆ ಪ್ರಶಸ್ತಿಗೆಜಿಲ್ಲೆಗೆ ಒಬ್ಬರಂತೆ ಆಯ್ಕೆ ಮಾಡುತ್ತಿದ್ದು ಇದಕ್ಕೆ ವಯೋಮಿತಿ ನಿರ್ಬಂಧ ಇರುವುದಿಲ್ಲ ಹಾಗೂಪ್ರತಿ ತಾಲ್ಲೂಕಿನಿಂದ ಶ್ರೇಷ್ಠ ಯುವ ಕೃಷಿಕ ಹಾಗೂ ಶ್ರೇಷ್ಠ ಯುವ ಕೃಷಿ ಮಹಿಳೆಯ ಪ್ರಶಸ್ತಿಗಾಗಿ ಒಬ್ಬರನ್ನು ಆಯ್ಕೆ ಮಾಡುತ್ತಿದ್ದು 35 ವರ್ಷಕ್ಕಿಂತ ಕಡಿಮೆ ವಯಸ್ಸಿನ ರೈತ/ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳ ಆಧಾರ ಕಾರ್ಡ್ ಮತ್ತು ಚುನಾವಣಾ ಗುರುತಿನಚೀಟಿ, ಜನ್ಮ ದಿನಾಂಕ ಪ್ರಮಾಣ ಪತ್ರ (ಎಸ್.ಎಸ್.ಎಲ್.ಸಿ. ಅಂಕಪಟ್ಟಿ), ಹೊಲದ ಉತಾರ (ಪಹಣಿ), ಪಾರ್ಸ್ ಪೋಟ ಅಳತೆಯ ಮೂರು ಪೋಟೊ, ಈಗಾಗಲೇ ಪಡೆದಿರುವ ಪ್ರಶಸ್ತಿ ಪತ್ರಗಳ ನಕಲು ಪ್ರತಿ, ಅಭ್ಯರ್ಥಿಯ ಸಾಧೆನಯ ಪತ್ರಿಕಾ ಪ್ರಕಟಣೆಗಳು, ಬ್ಯಾಂಕ್ ಪಾಸ್ ಪುಸ್ತಕ (ಮೊದಲನೆ ಪುಟದ ನಕಲು ಪ್ರತಿ) ಹಾಗೂ ಅವಿಷ್ಕಾರಗಳ ಮಾಹಿತಿ ಮುದ್ರಣದ ನಕಲು ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಸಿಇಟಿ ಫಲಿತಾಂಶ ಪ್ರಕಟ: ಆಗಸ್ಟ್ 5ರಿಂದ ದಾಖಲೆಗಳ ಆನ್ ಲೈನ್ ಪರಿಶೀಲನೆ, ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಆರಂಭ

ಆಸಕ್ತರು ಹಾವೇರಿ ಜಿಲ್ಲೆಯ ಹನುಮನಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಜಂಟಿ ಕೃಷಿ ನಿರ್ದೇಶಕರು, ವಿವಿಧ ತಾಲ್ಲೂಕಿನ ಸಹಾಯಕ ಕೃಷಿ ನಿದೇರ್ಶಕರು ಹಾಗೂ ತಾಲೂಕಿನ ಹೋಂಬಳಿಯ ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆ ಸಂಪರ್ಕಿಸಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 20-08-2022 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಈ ಕೃಷಿ ವಿಜ್ಞಾನ ಕೇಂದ್ರ, ಹನುಮನಮಟ್ಟಿ, ಈ ವಿಳಾಸಕ್ಕೆ ಸಲ್ಲಿಸಬೇಕು.

ಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08373-253524 ಸಂಪರ್ಕಿಸಲು ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING NEWS: ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ ರದ್ದು

Share.
Exit mobile version