Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧೀರೂಭಾಯಿ ಅಂಬಾನಿ ಜಯಂತಿ: ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ಫಲಿತಾಂಶ ಪ್ರಕಟ
KARNATAKA

ಧೀರೂಭಾಯಿ ಅಂಬಾನಿ ಜಯಂತಿ: ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ಫಲಿತಾಂಶ ಪ್ರಕಟ

By ವಸಂತ ಬಿ ಈಶ್ವರಗೆರೆ

ಮುಂಬೈ : ರಿಲಯನ್ಸ್ ಸಂಸ್ಥಾಪಕ ಹಾಗೂ ಮಾಜಿ ಅಧ್ಯಕ್ಷರಾದ ಧೀರೂಭಾಯಿ ಅಂಬಾನಿಯವರ 93ನೇ ಜಯಂತಿ ಹಿನ್ನೆಲೆಯಲ್ಲಿ ರಿಲಯನ್ಸ್ ಫೌಂಡೇಷನ್ 2025–26ನೇ ಶೈಕ್ಷಣಿಕ ಸಾಲಿನ ತನ್ನ ಪ್ರತಿಷ್ಠಿತ ಪದವಿ (UG) ಮತ್ತು ಸ್ನಾತಕೋತ್ತರ (PG) ವಿದ್ಯಾರ್ಥಿವೇತನಗಳ ಫಲಿತಾಂಶ ಪ್ರಕಟಿಸಿದೆ. ಈ ವರ್ಷ ದೇಶಾದ್ಯಂತ 5,000 ಯುಜಿ ಹಾಗೂ 100 ಪಿಜಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಯುಜಿ ವಿದ್ಯಾರ್ಥಿಗಳಿಗೆ ಗರಿಷ್ಠ ₹2 ಲಕ್ಷ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ ಗರಿಷ್ಠ ₹6 ಲಕ್ಷವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ಇದು 2022ರಲ್ಲಿ ಘೋಷಿಸಿದಂತೆ, ಮುಂದಿನ 10 ವರ್ಷಗಳಲ್ಲಿ 50,000 ವಿದ್ಯಾರ್ಥಿ ವೇತನಗಳನ್ನು ನೀಡುವ ರಿಲಯನ್ಸ್ ಫೌಂಡೇಷನ್‌ನ ಬದ್ಧತೆಯ ಭಾಗವಾಗಿದೆ. ಇದುವರೆಗೆ ಫೌಂಡೇಷನ್ ಒಟ್ಟು 33,471 ವಿದ್ಯಾರ್ಥಿವೇತನಗಳನ್ನು ವಿತರಿಸಿದೆ.

ದೇಶಾದ್ಯಂತ ವ್ಯಾಪಕವಾಗಿ ಭಾಗಿ:

2025–26ನೇ ಸಾಲಿಗೆ ಆಯ್ಕೆ ಪ್ರಕ್ರಿಯೆ ಸ್ಪರ್ಧಾತ್ಮಕವಾಗಿತ್ತು. 1.25 ಲಕ್ಷಕ್ಕೂ ಹೆಚ್ಚು ಅರ್ಜಿಗಳಲ್ಲಿ ಆಯ್ಕೆಯಾದ 5,100 ವಿದ್ಯಾರ್ಥಿಗಳು 28 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿದ್ದು, 15,544 ಶೈಕ್ಷಣಿಕ ಸಂಸ್ಥೆಗಳನ್ನು ಪ್ರತಿನಿಧಿಸುತ್ತಿದ್ದಾರೆ. ಇದು ಈ ಯೋಜನೆಯ ಅಖಿಲ ಭಾರತ ಮಟ್ಟದ ಪಾಲ್ಗೊಳ್ಳುವಿಕೆಯನ್ನು ತೋರಿಸುತ್ತದೆ. ರಿಲಯನ್ಸ್ ಫೌಂಡೇಷನ್‌ನ ವಕ್ತಾರರು ಹೇಳುವಂತೆ, “ಭಾರತದ ಯುವಜನತೆಯಲ್ಲಿ ಅಪಾರ ಪ್ರತಿಭೆ ಮತ್ತು ದೃಢ ಸಂಕಲ್ಪವಿದೆ. ನಮ್ಮ ವಿದ್ಯಾರ್ಥಿವೇತನಗಳು ಕೇವಲ ಆರ್ಥಿಕ ನೆರವಿಗೆ ಸೀಮಿತವಲ್ಲ; ಅವು ಮಾರ್ಗದರ್ಶನ (ಮೆಂಟರ್‌ಶಿಪ್), ಸಹಪಾಠಿಗಳ ಬಲಿಷ್ಠ ಜಾಲ ಹಾಗೂ ನಾಯಕತ್ವ ಅಭಿವೃದ್ಧಿ ಅವಕಾಶಗಳನ್ನು ಸಹ ಒದಗಿಸುತ್ತವೆ. ಹೊಸ ವಿದ್ಯಾರ್ಥಿವೇತನ ಪಡೆದವರು ಹಳೆಯ ಮಿತಿಗಳನ್ನು ಮೀರಿ ದೊಡ್ಡ ಕನಸು ಕಾಣಬೇಕು ಮತ್ತು ‘ವಿಕಸಿತ ಭಾರತ’ ಗುರಿಯತ್ತ ಮುನ್ನಡೆಯಬೇಕು ಎಂದು ನಾವು ಪ್ರೋತ್ಸಾಹಿಸುತ್ತೇವೆ,” ಎಂದರು.

ವೈವಿಧ್ಯ ಮತ್ತು ಶ್ರೇಷ್ಠತೆಗೆ ಒತ್ತು:

ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ವೈವಿಧ್ಯ ಮತ್ತು ಶೈಕ್ಷಣಿಕ ಶ್ರೇಷ್ಠತೆ ಎರಡೂ ಸ್ಪಷ್ಟವಾಗಿ ಗೋಚರಿಸುತ್ತವೆ. ಆಯ್ಕೆ ಆದವರಲ್ಲಿ ಶೇಕಡಾ 83ರಷ್ಟು ವಿದ್ಯಾರ್ಥಿಗಳು ವಾರ್ಷಿಕ ಆದಾಯ ₹2.5 ಲಕ್ಷಕ್ಕಿಂತ ಕಡಿಮೆ ಇರುವ ಕುಟುಂಬಗಳಿಂದ ಬಂದಿದ್ದಾರೆ. ಶೈಕ್ಷಣಿಕ ಸಾಧನೆಯ ವಿಚಾರಕ್ಕೆ ಬಂದರೆ ಶೇಕಡಾ 97ರಷ್ಟು ಯುಜಿ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. ಯುಜಿ ವಿದ್ಯಾರ್ಥಿಗಳಲ್ಲಿ ಶೇಕಡಾ 48ರಷ್ಟು ವಿದ್ಯಾರ್ಥಿನಿಯರು ಮತ್ತು ಶೇಕಡಾ 52ರಷ್ಟು ವಿದ್ಯಾರ್ಥಿಗಳು ಇದ್ದಾರೆ. ಈ ವರ್ಷ 146 ದಿವ್ಯಾಂಗ ವಿದ್ಯಾರ್ಥಿಗಳನ್ನೂ ಆಯ್ಕೆ ಮಾಡಲಾಗಿದೆ.

ಇದೇ ವೇಳೆ, ಆಯ್ಕೆಯಾದ 100 ಪಿಜಿ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ (Artificial Intelligence), ಕಂಪ್ಯೂಟರ್ ಸೈನ್ಸ್ (Computer Science), ನವೀಕರಿಸಬಹುದಾದ ಇಂಧನ (Renewable Energy) ಮತ್ತು ಲೈಫ್ ಸೈನ್ಸಸ್(Life Sciences) ಮೊದಲಾದ ಭವಿಷ್ಯವಿರುವ ವಿಷಯಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ.

ಅನುದಾನಕ್ಕೆ ಮೀರಿದ ಬೆಂಬಲ:

ವಿದ್ಯಾರ್ಥಿವೇತನದ ಜೊತೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜಗತ್ತಿನಾದ್ಯಂತ ಇರುವ- ಈ ಹಿಂದೆ ವಿದ್ಯಾರ್ಥಿವೇತನ ಪಡೆದವರ ಜಾಲದೊಂದಿಗೆ ಸಂಪರ್ಕ ಸಾಧಿಸುವ ಅವಕಾಶ ಹಾಗೂ ತಜ್ಞರ ಮೂಲಕ ನಡೆಸಲಾಗುವ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಹಿಂದಿನ ಹಲವಾರು ವಿದ್ಯಾರ್ಥಿಗಳು ದೇಶ ಹಾಗೂ ವಿದೇಶಗಳಲ್ಲಿ ಉತ್ತಮ ಉದ್ಯೋಗಗಳನ್ನು ಪಡೆದಿದ್ದು, ಸಂಶೋಧನಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಹೆಸರನ್ನು ಮಿಂಚುವಂತೆ ಮಾಡಿದ್ದಾರೆ.

ಫಲಿತಾಂಶ ಪರಿಶೀಲನೆ ಹೇಗೆ?

ಅರ್ಜಿದಾರರು scholarships.reliancefoundation.org ವೆಬ್‌ಸೈಟ್‌ಗೆ ಭೇಟಿ ನೀಡಿ, ತಮ್ಮ 17 ಅಂಕಿಯ ಅರ್ಜಿ ಸಂಖ್ಯೆ ಅಥವಾ ನೋಂದಾಯಿತ ಇ-ಮೇಲ್ ಐಡಿಯನ್ನು ನಮೂದಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.

ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್

KSDL, ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ: ಜನವರಿ.10, 12 ಬದಲಿಗೆ ಜ.18ಕ್ಕೆ ನೇಮಕಾತಿ ಪರೀಕ್ಷೆ

Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.