ರಾಮನಗರ: ಅರಸು, ಎಸ್.ಎಂ ಕೃಷ್ಣ, ವಿರೇಂದ್ಪ ಪಾಟೀಲ್, ಸಿದ್ದರಾಮಯ್ಯ, ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದವರು. ಇವರ ಜತೆಗೆ ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. ಅರಸು ಅವರ ಕಾಲದಲ್ಲಿ ಉಳುವವನಿಗೆ ಭೂಮಿ ಯೋಜನೆ ಕೊಟ್ಟರು. ಇಂದಿರಾ ಗಾಂಧಿ ಅವರು ವೃದ್ಧಾಪ್ಯ ವೇತನ ಸೇರಿದಂತೆ ಪಿಂಚಣಿ ಯೋಜನೆ ಜಾರಿ, ನಿವೇಶನ, ವಸತಿ ನೀಡುವ ಯೋಜನೆ ತಂದರು. ವಿರೇಂದ್ರ ಪಾಟೀಲ್ ಅವರ ಕಾಲದಲ್ಲಿ ಬಗರ್ ಹುಕುಂ ಸಾಗುವಳಿ ಅವಕಾಶ ನೀಡಿದರು. ಬಂಗಾರಪ್ಪನವರ ಕಾಲದಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. ನಾನು ಇಂಧಿನ ಸಚಿವನಾಗಿದ್ದಾಗ ರೈತರಿಗೆ 6ರಿಂದ 7 ಗಂಟೆಗೆ ವಿದ್ಯುತ್ ನೀಡುವುದನ್ನು ಏರಿಸಿದೆ. ಕೃಷ್ಣ ಅವರ ಕಾಲದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ, ಸ್ತ್ರೀಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ, ಬೆಂಗಳೂರನ್ನು ಜಾಗತಿಕ ನಗರವನ್ನಾಗಿ ಮಾಡಿದರು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದಂತ ಅವರು, ಸಿದ್ದರಾಮಯ್ಯ ಅವರು ತಮ್ಮ ಮೊದಲ ಸರ್ಕಾರದ ಅಧಿಯಲ್ಲಿ ಬಡವರ ಹೊಟ್ಟೆ ತುಂಬಿಸಲು ಅನ್ನಭಾಗ್ಯ, ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆ ನೀಡಿದರು. ಈ ಬಾರಿ ಅಧಿಕಾರಕ್ಕೆ ಬರುವ ಮುನ್ನ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತು. ಅಧಿಕಾರಕ್ಕೆ ಬಂದ ಕೂಡಲೇ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಮಾಸಿಕ 2 ಸಾವಿರ ಆರ್ಥಿಕ ನೆರವು, ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಹಾಗೂ ರೈತರ ಹಾಲಿನ ಪ್ರೋತ್ಸಾಹ ಬಾಕಿ ಹಣ ಶೀಘ್ರದಲ್ಲೇ ದೊರೆಯಲಿದೆ ಎಂದರು.
ಯೋಗೇಶ್ವರ್ ಕೆರೆಗೆ ನೀರು ತುಂಬಿಸಿ ರೈತರಿಗೆ ನೆರವಾಗಿದ್ದಾರೆ. ಸತ್ತೇಗಾಲದಿಂದ ನೀರು ತರುವ ಯೋಜನೆ ಮಾಡುತ್ತಿದ್ದೇವೆ. ಇಂತಹ ಒಂದೇ ಒಂದು ಕಾರ್ಯಕ್ರಮವನ್ನು ಮಾಡಿದ್ದಾರಾ ಎಂದು ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಕೇಳಲು ಬಯಸುತ್ತೇನೆ. ಇಂತಹ ಕಾರ್ಯಕ್ರಮವನ್ನು ನಾವು ಕೊಟ್ಟಿದ್ದೇವೆ ಎಂದು ಅವರು ಹೇಳಿದರೇ ಈಕೂಡಲೇ ನಾನು ಈ ಚುನಾವಣಾ ಪ್ರಚಾರ ನಿಲ್ಲಿಸಿ ಇಲ್ಲಿಂದ ಹೊರಟುಹೋಗುತ್ತೇನೆ ಎಂದರು.
ಜೆಡಿಎಸ್ 19 ಕ್ಷೇತ್ರದಲ್ಲಿ ಗೆದ್ದಿತ್ತು, ಈಗ 18 ಸ್ಥಾನಕ್ಕೆ ಕುಸಿದಿದೆ. ಇಲ್ಲಿ ಐದು ಬಾರಿ ಶಾಸಕರಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷ ಸೇರಲು ಯೋಗೇಶ್ವರ್ ದಡ್ಡರೇ? ಈ ಕ್ಷೇತ್ರದ ಜನರ ಋಣ ತೀರಿಸಬೇಕು ಎಂದರೆ ಕಾಂಗ್ರೆಸ್ ಸರ್ಕಾರದ ಜತೆ ಕೈಜೋಡಿಸಬೇಕು. ಆಗ ಮಾತ್ರ ಜನರ ಬದುಕು ಬದಲಾವಣೆ ಮಾಡಲು ಸಾಧ್ಯ ಎಂದು ಅರಿತಿದ್ದಾರೆ. ನಾನು ಕೆಲವು ಬಾರಿ ಯೋಗೇಶ್ವರ್ ಅವರನ್ನು ಬೈದಿದ್ದೇನೆ, ತಿಳುವಳಿಕೆ ಹೇಳಿದ್ದೇನೆ. ಆದರೂ ಇದು ನಮ್ಮ ಕ್ಷೇತ್ರ, ನಮ್ಮ ಜನ ಇದ್ದಾರೆ. ನನ್ನ ಹೆಣ ದೊಡ್ಡಾಲಹಳ್ಳಿಯಲ್ಲಿ, ಯೋಗೇಶ್ವರ್ ಅವರ ಹೆಣ ಚಕ್ಕೆರೆಯಲ್ಲಿ ಹಾಕಲಾಗುವುದು. ಹಾಸನಕ್ಕೆ ಹೋಗುವುದಿಲ್ಲ. ನಮ್ಮ ಪಲ್ಲಕ್ಕಿ ಹಾಗೂ ಚಟ್ಟ ಹೊರುವುದು ಇಲ್ಲೇ ಎಂದು ತಿಳಿಸಿದರು.
ಐಸಿಸಿ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ನಿರ್ಧರಿಸಿದ ಭಾರತ | ICC Champions Trophy