ಬೆಂಗಳೂರು : “ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು. ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ ಮಾಡುವ ಅಗತ್ಯವಿಲ್ಲ” ಎಂದರು.
ಹಿಂದುತ್ವದ ಮೇಲಿನ ದಾಳಿ ಹಾಗೂ ಬಾನು ಮುಷ್ತಾಕ್ ಆಯ್ಕೆಯ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಾವು ಆಚರಣೆ ಮಾಡುವಷ್ಟು ಹಿಂದೂ ಪದ್ಧತಿಯನ್ನು ಅವರೆಲ್ಲಿ (ಬಿಜೆಪಿ) ಆಚರಣೆ ಮಾಡುತ್ತಾರೆ. ನಾನೇನು ಯಾರ ವಿರುದ್ಧವೂ ಇಲ್ಲ, ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಎಲ್ಲರಿಗೂ ಅವಕಾಶ ಸಿಗಬೇಕು. ಯಾವ ಹಿಂದೂ ದೇವಸ್ಥಾನದಲ್ಲಿ ಬೇರೆ ಧರ್ಮದವರು ಬರಬಾರದು ಎಂದು ಹೇಳಿರುವ ಉದಾಹರಣೆ ಇದ್ದರೆ ತೋರಿಸಿ” ಎಂದರು.
ಚಾಮುಂಡೇಶ್ವರಿ ಬೆಟ್ಟಕ್ಕೆ ಕೇವಲ ಹಿಂದೂಗಳು ಮಾತ್ರ ಬರಬೇಕೆಂಬ ನಿಯಮವಿದೆಯೇ?: ಡಿಸಿಎಂ ಡಿಕೆಶಿ ಪ್ರಶ್ನೆ
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ