ಬೆಂಗಳೂರು: ಪ್ರಜ್ವಲ್ ಅವರನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿರುವ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಕ್ಕೆ ನಿಮ್ಮ ಮಗನನ್ನು ಸಾಯಲಿ ಅಂತಲೇ ಕಳಿಸಿದಿರಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಸಿಎಂ ಹೇಳಿಕೆಯ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಕೆಂಡಾಮಂಡಲರಾದ ಅವರು; ಯಾರಿಗೆ ಆಗಲಿ ನೋವು ನೋವೇ. ನಿಮ್ಮ ಕುಟುಂಬದಲ್ಲಿ ಒಂದು ಘಟನೆ ನಡೆದಿದೆ. ಆಗ ನಿಮ್ಮ ಮಗನನ್ನು ನೀವೇ ಕಳಿಸಿದಿರಾ? ಅವರ ಸಾವಿಗೆ ನೀವೇ ಕಾರಣರಾ? ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ರಾಜತಾಂತ್ರಿಕ ಪಾಸ್ ಪೋರ್ಟ್ ಬಗ್ಗೆ ಇವರೆಲ್ಲಾ ಮಾತನಾಡುತ್ತಿದ್ದಾರೆ. ಆದರೆ ಇವರಿಗೆ ಕಾನೂನಿನ ತಿಳಿವಳಿಕೆಯೇ ಇಲ್ಲ. ಈಗ ಪ್ರಜ್ವಲ್ ಗೆ ವಾಪಸ್ ಕರೆದುಕೊಂಡು ಬರಲು ಪತ್ರ ಬರೆದಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಕೇಳಿದ್ದಾರೆ. ತಕ್ಷಣಕ್ಕೆ ಅದು ಸಾಧ್ಯವಿಲ್ಲ ಎಂದು ಅವರು ಹೇಳಿದರು.