ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯಾಧ್ಯಂತ ಕೈಗಾರಿಕೆಗಳು, ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಕೆ ಮಾಡೋದು ಕಡ್ಡಾಯಗೊಳಿಸಿ, ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಈ ಕಡತವನ್ನು ರಾಜ್ಯಪಾಲಕರ ಸಹಿಗೆ ಕಳುಹಿಸಲಾಗಿತ್ತು. ಇಂತಹ ಕಡತವನ್ನು ತಿರಸ್ಕರಿಸಿ, ಸಹಿ ಹಾಕದೇ ವಾಪಾಸ್ ರಾಜ್ಯಪಾಲರು ಕಳಿಸಲಾಗಿದೆ ಎನ್ನಲಾಗಿತ್ತು. ಆದ್ರೇ ವಾಪಾಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ ಎಂಬುದಾಗಿ ರಾಜಭವನ ಸ್ಪಷ್ಟೀಕರಣ ನೀಡಿದೆ.
ಈ ಕುರಿತಂತೆ ರಾಜಭವನದಿಂದ ಸ್ಪಷ್ಟೀಕರಣ ಬಿಡುಗಡೆ ಮಾಡಿದ್ದು, ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯ ಸುಗ್ರೀವಾಜ್ಞೆ ಕಡತವನ್ನು ತಿರಸ್ಕರಿಸಿಲ್ಲ. ಸರ್ಕಾರಕ್ಕೆ ವಾಪಾಸ್ ಕಳುಹಿಸಿದ್ದೇವೆ ಎಂಬುದಾಗಿ ತಿಳಿಸಿದೆ.
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ. ಅದನ್ನು ರಾಜ್ಯ ಸರ್ಕಾರಕ್ಕೆ ವಾಪಾಸ್ ಕಳುಹಿಸಿದ್ದೇವೆ ಎಂಬುದಾಗಿ ರಾಜಭವನದಿಂದ ಸ್ಪಷ್ಟೀಕರಣ ನೀಡಲಾಗಿದೆ.
ಅಂದಹಾಗೇ ಈಗಾಗಲೇ ಬೆಂಗಳೂರಿನಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಹಾಕದಂತ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ನೋಟಿಸ್ ಗಳನ್ನು ಬಿಬಿಎಂಪಿ ನೀಡುತ್ತಿದೆ.
ಮಂಗಳೂರಲ್ಲಿ ಫೆ.17 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ : ಡಿಸಿಎಂ ಡಿಕೆ ಸ್ಪಷ್ಟನೆ
BREAKING: ‘ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ’ರಾಗಿ ಬಿಸಿಸಿಐ ಕಾರ್ಯದರ್ಶಿ ‘ಜಯ್ ಶಾ’ ಮರು ನೇಮಕ