ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ವಿಚಾರ ಕುರಿತಂತೆ ಅವರೇನು ವಿಧಾನಸೌಧದಲ್ಲಿ ಯಾರನ್ನು ರೇಪ್ ಮಾಡಿರಲಿಲ್ಲ ಅಲ್ವಾ? ಅವರು ಏನು ಯಾರಿಗೂ ಎಚ್ ಐ ವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಅಂಶಗಳೇ ಉಚ್ಚಟನೆಗೆ ಕಾರಣ
ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಹಲವು ಪ್ರಮುಖ ಅಂಶಗಳಿವೆ.
ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಶೋಕಾಸ್ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡರು. ಕಳೆದ ವರ್ಷ ರಾಜ್ಯಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಜೊತೆಗೆ ಸಂಪರ್ಕ ಹೊಂದಿದ್ದರು. ಬಹಿರಂಗವಾಗಿಯೇ ಕಾಂಗ್ರೆಸ್ ಜೊತೆಗೆ ಇಬ್ಬರು ಹೊಂದಾಣಿಕೆ ಮಾಡಿಕೊಂಡಿದ್ದರು.
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿಯೇ ಮತ ಚಲಾಯಿಸಿದ್ದರು. ಅಲ್ಲದೆ ಪಕ್ಷದಿಂದ ಬಹುತೇಕ ದೂರ ಉಳಿದಿದ್ದರು. ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಶಿವರಾಮ ಹೆಬ್ಬಾರ್ ಹೊಗಳುತ್ತಿದ್ದರು. ಬಿಜೆಪಿ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದರು. ಅಲ್ಲದೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಕೂಡ ಶಾಸಕ ಹೆಬ್ಬಾರ್ ಅವರು ಗೈರಾಗುತ್ತಿದ್ದರು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.