ಬೆಂಗಳೂರು: ಹಾಲಿನ ದರ ಏರಿಕೆ ಮಾಡಿದ್ದಾಯ್ತು, ಕಸ ಸಂಗ್ರಹಣ ಮೇಲೆ ಸೆಸ್ ಹಾಕಿದ್ದಾಯ್ತು, ಈಗ ಏಕಾಏಕಿ ಡೀಸೆಲ್ ಬೆಲೆಯನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿದೆ ಈ ದರಿದ್ರ ಕಾಂಗ್ರೆಸ್ ಸರ್ಕಾರ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ಧರಾಮಯ್ಯ ಅವರು ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ಹೆಚ್ಚಿಸಿ, ಬಡವರು, ಮಾಧ್ಯಮ ವರ್ಗದ ರಕ್ತ ಹೀರಲು ಹೊರಟಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.
ಹಾಲಿನ ದರ ಏರಿಕೆ ಮಾಡಿದ್ದಾಯ್ತು, ಕಸ ಸಂಗ್ರಹಣ ಮೇಲೆ ಸೆಸ್ ಹಾಕಿದ್ದಾಯ್ತು, ಈಗ ಏಕಾಏಕಿ ಡೀಸೆಲ್ ಬೆಲೆಯನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿದೆ ಈ ದರಿದ್ರ ಕಾಂಗ್ರೆಸ್ ಸರ್ಕಾರ. ಡೀಸೆಲ್ ಅಂದರೆ ಅದು ಸರಕು ಸಾಗಾಣಿಕೆಗೆ ಉಪಯೋಗಿಸುವ ಇಂಧನ. ಡೀಸೆಲ್ ಬೆಲೆ ಹೆಚ್ಚಾದರೆ ಹಾಲು, ತರಕಾರಿ, ಹಣ್ಣು, ದಿನಸಿ, ಟ್ಯಾಕ್ಸಿ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ, ಸೇವೆಗಳ ಬೆಲೆ ಹೆಚ್ಚಾಗುತ್ತವೆ ಎಂದು ಸ್ವಯಂಘೋಷಿತ ಆರ್ಥಿಕ ತಜ್ಞರಾದ ಸಿದ್ದರಾಮಯ್ಯನವರಿಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಸಾರಿಗೆ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದೆ ಇತ್ತೀಚೆಗಷ್ಟೆ ಬಸ್ ಟಿಕೆಟ್ ದರ ಏರಿಕೆ ಆಗಿತ್ತು. ಈಗ ಡೀಸೆಲ್ ಬೆಲೆ ಏರಿಕೆ ಆಗಿದೆ ಎನ್ನುವ ನೆಪವೊಡ್ಡಿ ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ. ಇನ್ನು ಯಾವ ಯಾವ ವಸ್ತುಗಳ ಮೇಲೆ ತೆರಿಗೆ ಹಾಕಬೇಕು, ಯಾವ ಯಾವ ವಸ್ತುಗಳ ಬೆಲೆ ಏರಿಕೆ ಮಾಡಬೇಕು ಎಂದು ಹೊಂಚು ಹಾಕಿದ್ದೀರಿ ಸಿದ್ದರಾಮಯ್ಯನವರೇ? ಬಡವರು, ಮಧ್ಯಮ ವರ್ಗದ ರಕ್ತ ಹೀರುತ್ತಿರುವ ರಕ್ತಪಿಪಾಸು ಕಾಂಗ್ರೆಸ್ ಸರ್ಕಾರಕ್ಕೆ ಜನರ ಶಾಪ ತಟ್ಟದೇ ಇರದು ಎಂಬುದಾಗಿ ಕಿಡಿಕಾರಿದ್ದಾರೆ.
ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ.
ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ @siddaramaiah ಅವರು ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ಹೆಚ್ಚಿಸಿ,… pic.twitter.com/1h1zFHr8HL
— R. Ashoka (@RAshokaBJP) April 1, 2025
ರಾಜ್ಯದ ಸರ್ಕಾರಿ ಅಧಿಕಾರಿ, ನೌಕರರ ಗಮನಕ್ಕೆ: ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಅರ್ಜಿ ಆಹ್ವಾನ
BREAKING: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಡೀಸೆಲ್ ದರ ರೂ.2 ಹೆಚ್ಚಳ