ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಮೂಲ ಕಾಂಗ್ರೆಸ್ ವರ್ಸಸ್ ವಲಸಿಗ ಕಾಂಗ್ರೆಸ್ಸಿಗರ ನಡುವೆ ಫೈಟ್ ಶುರುವಾಗಿದೆ. ಈಗಾಗಲೇ ಹೈಕಮಾಂಡ್ ಲಿಂಗಾಯತ ಅಸ್ತ್ರ ಪ್ರಯೋಗಕ್ಕೆ ಪ್ಲ್ಯಾನ್ ಮಾಡಲಾಗಿದೆ ಎಂದು ಚರ್ಚೆಗೆ ಗ್ರಾಸವಾಗುತ್ತಿದೆ.
ಚಿಕ್ಕಮಗಳೂರು ಕಾಂಗ್ರೆಸ್ ಘಟಕದಲ್ಲಿ ಸಿ.ಟಿ.ರವಿ ಮಾಜಿ ಆಪ್ತನನ್ನು ಕಣಕ್ಕಿಸಲು ಪ್ಲ್ಯಾನ್ ಮಾಡಲಾಗಿತ್ತು. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ತಮ್ಮಯ್ಯು. ಟಿಕೆಟ್ಗೆ ಅರ್ಜಿ ಸಲ್ಲಿಸದಿದ್ರೂ ತಮ್ಮಯ್ಯನಿಗೆ ಟಿಕೆಟ್ ನೀಡಲು ಪ್ಲ್ಯಾನ್ ಮಾಡಿದ್ದರು. ಅರ್ಜಿ ಹಾಕಿದ 6 ಆಕಾಂಕ್ಷಿಗಳಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಫೈಟ್ ಶುರುವಾಯ್ತು. ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ನೇತೃತ್ವದಲ್ಲಿ ಕಾರ್ಯಕರ್ತರರಿಂದ ಭಾರೀ ವಿರೋಧ ವ್ಯಕ್ತವಾಯಿತು. ವಲಸಿಗರಿಗೆ ಟಿಕೆಟ್ ನೀಡಿದ್ರೆ ಪಕ್ಷಕ್ಕೆ ರಾಜೀನಾಮ ನೀಡುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
BIGG NEWS : ಜೆಡಿಎಸ್ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಶೀಘ್ರವೇ ಬಿಜೆಪಿ ಸೇರ್ಪಡೆ