ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
BIG BREAKING NEWS: ಬಂಡೆಮಠ ಶ್ರೀಗಳ ಆತ್ಮಹತ್ಯೆ ಕೇಸ್ : ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್
ನಯನಾಗೆ ಟಿಕೆಟ್ ನೀಡದಂತೆ ಮತ್ತೆ ಕಾಂಗ್ರೆಸ್ ಮುಖಂಡರು ಸಭೆ ನಡೆಸಿದ್ದಾರೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವಸ್ತಾರೆಯಲ್ಲಿ ಕೈ ಮುಖಂಡರಿಂದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಭಾಗಿಯಾಗಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಸಭೆಯಲ್ಲಿ ಇದ್ದಾರೆ. ನಯನಾಗೆ ಟಿಕೆಟ್ ನೀಡದಂತೆ ಕೆಪಿಸಿಸಿಗೆ ಮುಖಂಡರು ಮನವಿ ಮಾಡಿದ್ದಾರೆ.
BIG BREAKING NEWS: ಬಂಡೆಮಠ ಶ್ರೀಗಳ ಆತ್ಮಹತ್ಯೆ ಕೇಸ್ : ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್
ಕಳೆದ ವಾರವೂ ಸಹ ನಯನಾ ಮೋಟಮ್ಮ ವಿರುದ್ಧ ಕಾಂಗ್ರೆಸ್ ಮುಖಂಡರು ಸಭೆ ನಡೆಸಿದ್ದರು. ಇದೀಗ ಮತ್ತೆ ಕಾಂಗ್ರೆಸ್ ನಲ್ಲಿ ಭಿನ್ನ ಮತ ಗೋಚರಿಸಿದ್ದು ನಯನಾ ಮೋಟಮ್ಮ ವಿರುದ್ಧ ಕಾಂಗ್ರೆಸ್ ಮುಖಂಡರೆ ಆಕ್ರೋಶ ಹೊರಗೆ ಹಾಕಿದ್ದಾರೆ.