ಬೆಂಗಳೂರು: ಹಿರಿಯ ನಾಗರೀಕರಿಗೆ ಉಚಿತ ಡಿಜಿಟಲ್ ಸಾಕ್ಷರತೆ ಮತ್ತು ಸೈಬರ್ ಸುರಕ್ಷತೆಯ ತರಬೇತಿಯನ್ನು ಫೆಬ್ರವರಿ 2ರಂದು ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ.
ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ನಗರ ಪೊಲೀಸ್ ಹಾಗೂ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಜಂಟಿ ಸಹಯೋಗದಲ್ಲಿ ಕಳೆದ 22 ವರ್ಷಗಳಿಂದ ಹಿರಿಯರ ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದೆ. ಅದರಂತೆ ಪ್ರತಿ ತಿಂಗಳು ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಎಲ್ಲಾ ವಲಯಗಳಲ್ಲೂ ಹಿರಿಯರ ನಾಗರಿಕರಿಗೆ ಉಚಿತ ಡಿಜಿಟಲ್ ಸಾಕ್ಷರತೆ ಮತ್ತು ಸೈಬರ್ ಸುರಕ್ಷತೆಯ ತರಬೇತಿಯನ್ನು
ಆಯೋಜಿಸಿ, ಹಿರಿಯ ನಾಗರಿಕರಿಗೆ ಇದರ ಬಗ್ಗೆ ಅರಿವನ್ನು ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಅದರಂತೆ ದಿನಾಂಕ:02/02/2025 ರ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ನಂ.130, ರಾಷ್ಟ್ರೀಯ ವಿದ್ಯಾಲಯ ರಸ್ತೆ, 2ನೇ ಬ್ಲಾಕ್ ಜಯನಗರ, ಬೆಂಗಳೂರು-560004, ಈ ವಿಳಾಸದಲ್ಲಿರುವ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟಿನ ಡಿಮೆನ್ಸಿಯ ಡೇ ಕೇರ್ ಆವರಣದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಆದ್ದರಿಂದ ಹೆಚ್ಚಿನ ಹಿರಿಯ ನಾಗರೀಕರು ಈ ಕಾರ್ಯಕ್ರಮಕ್ಕೆ ಹಾಜರಾಗಿ, ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-23352833. 3.7899241090.
ಆ ಸುಳ್ಳಿನಿಂದ ಈಗ ನೀವು ಜನರೆದುರು ಬೆತ್ತಲಾಗಿದ್ದೀರಿ: ಸಿಎಂ ಸಿದ್ಧರಾಮಯ್ಯ ವಿರುದ್ಧ JDS ಕಿಡಿ
BREAKING : ನಟ ದರ್ಶನ್ ಗೆ ರಿಲೀಫ್ : ಫೆ.10 ರವರೆಗೆ ಮೈಸೂರಿನಲ್ಲಿರಲು ಅನುಮತಿ ನೀಡಿ ಕೋರ್ಟ್ ಆದೇಶ.!