ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಇಂದಿರಾ ಕ್ಯಾಂಟೀನ್‌ಗಳಿಗೆ ಡಿಜಿಟಲ್ ಟಚ್ ನೀಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಆನ್ ಲೈನ್ ನಲ್ಲೂ ಊಟ, ತಿಂಡಿ ಬುಕ್ ಮಾಡಬಹುದು.
ಹೌದು, ಬೆಂಗಳೂರಿನ 169 ಇಂದಿರಾ ಕ್ಯಾಂಟೀನ್ಗಳಲ್ಲಿ ಡಿಜಿಟಲ್ ವ್ಯವಸ್ಥೆ ಅಳವಡಿಕೆಗೆ ಸಜ್ಜಾಗಿರೋ ಪಾಲಿಕೆ, ಇದೀಗ ಆರ್.ಆರ್.ನಗರ ವ್ಯಾಪ್ತಿಯಲ್ಲಿ ಟ್ರಯಲ್ ನಡೆಸಿ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ.
ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಡಿಜಿಟಲ್ ವ್ಯವಸ್ಥೆ ಅಳವಡಿಕೆಗೆ ಶೀಘ್ರದಲ್ಲೇ ಟೆಂಡರ್ ಕರೆಯಲು ಸಿದ್ಧತೆ ನಡೆಸಲಾಗಿದ್ದು, ಶೀಘ್ರವೇ ಬೆಂಗಳೂರಿನಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ ಎನ್ನಲಾಗಿದೆ.