ನವದೆಹಲಿ: ಭಾರತ ಹಾಕಿ ತಂಡದ ಮಾಜಿ ನಾಯಕ ಮತ್ತು 1998ರ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ತಂಡದ ಸದಸ್ಯ ದಿಲೀಪ್ ಟಿರ್ಕಿ ( Former India hockey captain Dilip Tirkey ) ಅವರು ಶುಕ್ರವಾರ ಹಾಕಿ ಇಂಡಿಯಾ (Hockey India – HI) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

1996ರ ಅಟ್ಲಾಂಟಾ, 2000 ಸಿಡ್ನಿ ಮತ್ತು 2004ರ ಅಥೆನ್ಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಒಡಿಶಾದ 44ರ ಹರೆಯದ ಶ್ರೇಷ್ಠ, ಟಿಕಿ ತನ್ನ 15 ವರ್ಷಗಳ ವೃತ್ತಿಜೀವನದಲ್ಲಿ ದಾಖಲೆಯ 412 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

BIG BREAKING NEWS: ಮುರುಘಾ ಶ್ರೀಗಳಿಗೆ ಬಿಗ್ ಶಾಕ್: ಜಾಮೀನು ಅರ್ಜಿ ತಿರಸ್ಕಾರ | Murugha Sri

ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್ (ಎಫ್ಐಎಚ್) ಮತ್ತು ಆಡಳಿತಾಧಿಕಾರಿಗಳ ಸಮಿತಿ (ಸಿಒಎ) ಆಗಸ್ಟ್ನಲ್ಲಿ ನಿಗದಿಪಡಿಸಿದ ಗಡುವಿನ ಪ್ರಕಾರ ಹಾಕಿ ಇಂಡಿಯಾ ಚುನಾವಣಾ ಪ್ರಕ್ರಿಯೆಯನ್ನು ಅಕ್ಟೋಬರ್ 9 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿತ್ತು.

ಟಿರ್ಕಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೊದಲು, ರಾಷ್ಟ್ರೀಯ ಕ್ರೀಡಾ ಸಂಹಿತೆಯ ಉಲ್ಲಂಘನೆಯ ಆರೋಪದ ಮೇಲೆ ಹಾಕಿ ಇಂಡಿಯಾ ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ಸಿಒಎ ವ್ಯಾಪ್ತಿಗೆ ಒಳಪಟ್ಟಿತ್ತು.

ರಾಷ್ಟ್ರೀಯ ಕ್ರೀಡಾ ಒಕ್ಕೂಟದ ಅಧ್ಯಕ್ಷರಾದ ನಂತರ ಸಿಒಎ ಮತ್ತು ಅದರ ಸದಸ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ.

Share.
Exit mobile version