ಬೆಳಗಾವಿ : ಇನ್ನೇನು ಕೆಲವೇ ಕ್ಷಣಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ಆರಂಭವಾಗಲಿದೆ. ಈ ಒಂದು ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ಹಗರಣ, ಮುಡಾ ಹಗರಣ, ವಕ್ಫ್ ವಿವಾದ, BPL ಕಾರ್ಡ್ ಪರಿಷ್ಕರಣೆ ಕುರಿತಂತೆ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದರ ಮಧ್ಯ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ ಎಂದರು. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು. ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ಬಹಳ ಚಿಂತೆ ಇದೆ. ಸರ್ಕಾರವೂ ಎಚ್ಚೆತ್ತುಕೊಂಡಿದೆ ಎಂದರು.