ನವದೆಹಲಿ: ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಒಂದು ತಿಂಗಳ ನಂತರ, ಭಾರತದ ಮಾಜಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಮತ್ತು ಮಾರ್ಗದರ್ಶಕರಾಗಿ ಸೇರಿಕೊಂಡಿದ್ದಾರೆ.

ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ಹೊಸ ಅವತಾರದಲ್ಲಿ ಆರ್ಸಿಬಿಗೆ ಸ್ವಾಗತಿಸುತ್ತೇವೆ. ಆರ್ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಡಿಕೆ ಕಾರ್ಯನಿರ್ವಹಿಸಲಿದ್ದಾರೆ ಅಂಥ ಆರ್‌ಸಿಬಿ ತನ್ನ ಟ್ವಿಟರ್‌ ಖಾತೆಯಲ್ಲಿ ಹೇಳಿಕೆ ನೀಡಿದೆ.

ದಿನೇಶ್ ಕಾರ್ತಿಕ್ 94 ಏಕದಿನ ಪಂದ್ಯಗಳಲ್ಲಿ 1,792 ರನ್ ಮತ್ತು 9 ಅರ್ಧಶತಕಗಳನ್ನು ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಕಾರ್ತಿಕ್ 42 ಇನ್ನಿಂಗ್ಸ್ಗಳಿಂದ ಬಾಂಗ್ಲಾದೇಶ ವಿರುದ್ಧ ಶತಕ ಸೇರಿದಂತೆ 1,025 ರನ್ ಗಳಿಸಿದ್ದಾರೆ. ಟಿ20ಐನಲ್ಲಿ 60 ಪಂದ್ಯಗಳಲ್ಲಿ 686 ರನ್ ಗಳಿಸಿದ್ದಾರೆ.

 

Share.
Exit mobile version