ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಸೋಲಿಸಲೇಬೇಕು. ಅವರು ಸಮುದಾಯಕ್ಕಾಗಲೀ, ತಮ್ಮ ಲೋಕಸಭಾ ಕ್ಷೇತ್ರಕ್ಕೆ ಆಗಲೀ ಯಾವುದೇ ಕೊಡುಗೆ ನೀಡಿಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದ್ದಂತ ದಿಂಗಾಲೇಶ್ವರ ಶ್ರೀಗಳು, ಲೋಕಸಭಾ ಚುನಾವಣಾ ಆಖಾಡಕ್ಕೆ ಇಳಿದಿದ್ದರು. ನಾಮಪತ್ರ ಕೂಡ ಸಲ್ಲಿಸಿ, ಚುನಾವಣಾ ಪ್ರಚಾರದಲ್ಲೂ ತೊಡಗಿದ್ದರು. ಆದ್ರೇ ದಿಢೀರ್ ಬೆಳವಣಿಗೆಯಲ್ಲಿ ಇಂದು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.
ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಹಾಗೂ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಸೋಲಿಸಲೇಬೇಕು ಅಂತ ಕಣಕ್ಕೆಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಇಳಿದಿದ್ದರು.
ಇದಷ್ಟೇ ಅಲ್ಲದೇ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ಲೋಕಸಭಾ ಚುನಾವಣೆಯ ಮತಬೇಟೆಯಲ್ಲೂ ತೊಡಗಿದ್ದರು. ಇಂತಹ ಅವರು ಇಂದು ನಾಮಪತ್ರವನ್ನು ಹಿಂಪಡೆಯುವ ಮೂಲಕ, ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಅಂದಹಾಗೇ, ದಿಂಗಾಲೇಶ್ವರ ಶ್ರೀಗಳು ನಾಪಮಪತ್ರವನ್ನು ತಮ್ಮ ಸೂಚಕಾರದ ಸಚ್ಚಿನ್ ಪಾಟೀಲ್ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ಹಿಂಪಡೆದು, ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪೋಟೋ ಸಾಧ್ಯತೆ ಇದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ
ಲೋಕಸಭಾ ಚುನಾವಣೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ