ದಾವಣಗೆರೆ : ಧಾರವಾಡದಲ್ಲಿ ಲೋಕಸಭಾ ಚುನಾವಣೆಯಲ್ಲಿ ಫಿಕ್ಸಿಂಗ್ ಆಗಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಪ್ರಹ್ಲಾದ ಜೋಶಿ ಅವರೇ ಆಯ್ಕೆ ಮಾಡಿದ್ದಾರೆ ಎಂದು ಧಾರವಾಡ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಫಕ್ಕಿರ ದಿಂಗಾಲೇಶ್ವರ ಸ್ವಾಮೀಜಿ ಗಂಭೀರವಾದ ಆರೋಪ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಪಂಚಮಸಾಲಿ ಗುರುಪೀಠದಲ್ಲಿ ಮಾತನಾಡಿದ ಅವರು, ಲಿಂಗಾಯತ ನಾಯಕರನ್ನು ತುಳಿಯುವುದರಲ್ಲಿ ಪ್ರಹ್ಲಾದ ಜೋಶಿ ಪ್ರಮುಖ ಪಾತ್ರವಿದೆ ಎಂದು ಹನಗವಾಡಿಯ ಪಂಚಮಸಾಲಿ ಪೀಠದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ನೀಡಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಣಕಾಡಿಯ ಪಂಚಮಸಾಲಿ ಪೀಠದಲ್ಲಿ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಕ್ತರು ಸಮಾಜ ಸೇವೆಗೆ ಹೆಚ್ಚಿನ ಅವಕಾಶ ನೀಡುತ್ತಾರೆ. ನಾವು ನಿಭಾಯಿಸುತ್ತೇವೆ ನನ್ನ ರಾಜಕೀಯ ಪ್ರವೇಶವನ್ನು ಎಲ್ಲಾ ಸಮಾಜದ ಜನರು ಸ್ವಾಗತ ಮಾಡಿದ್ದಾರೆ. ಬ್ರಾಹ್ಮಣ ಸಮಾಜದವರು ಕೂಡ ಪ್ರಮುಖವಾಗಿ ಸ್ವಾಗತ ಮಾಡಿದ್ದಾರೆ.ನಾನು ಬಿಜೆಪಿ ಬಂಡಾಯ ಅಥವಾ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಲ್ಲ ಎಂದು ಹನಗವಾಡಿಯ ಪಂಚಮಸಾಲಿ ಪೀಠದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ನೀಡಿದರು.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಲಿಂಗಾಯತ ಮತಗಳು ಅಧಿಕವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ, ಬ್ರಾಹ್ಮಣ ಸಮಾಜದ ಪ್ರಲ್ಹಾದ್ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಕುರುಬ ಸಮಾಜದ ವಿನೋದ್ ಅಸೂಟಿ ಕಣದಲ್ಲಿದ್ದಾರೆ.