Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ: ₹4.79 ಕೋಟಿ ಮೌಲ್ಯದ ಗಾಂಜಾ ವಶ

23/04/2026 2:39 PM

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM

BREAKING: ಬಿಕ್ಕಾಜಿ ಫುಡ್ಸ್ ಸಂಸ್ಥಾಪಕ ಶ್ರೀ ಶಿವ ರತನ್ ಅಗರ್ವಾಲ್ ನಿಧನ: ಭಾರತೀಯ ಲಘು ಆಹಾರ ಉದ್ಯಮದ ಧ್ರುವತಾರೆ ಅಸ್ತ

23/04/2026 2:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ : ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ
KARNATAKA

ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ : ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ

By kannadanewsnow5730/09/2025 6:06 AM

ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ  ಆದೇಶ ಪ್ರಕಟಿಸಿದೆ.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.

ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.

ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

Direct recruitment for state civil service posts: 3 years relaxation in maximum age limit of candidates
Share. Facebook Twitter LinkedIn WhatsApp Email

Related Posts

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ: ₹4.79 ಕೋಟಿ ಮೌಲ್ಯದ ಗಾಂಜಾ ವಶ

23/04/2026 2:39 PM1 Min Read

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM1 Min Read

ಮೊಸರು ಗಟ್ಟಿಯಾಗಿ ಹೆಪ್ಪುಗಟ್ಟಲು ಈ ಒಂದು ಎಲೆ ಸಾಕು: ಇಲ್ಲಿದೆ ಅದ್ಭುತ ಟ್ರಿಕ್ಸ್.!

23/04/2026 1:56 PM1 Min Read
Recent News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ: ₹4.79 ಕೋಟಿ ಮೌಲ್ಯದ ಗಾಂಜಾ ವಶ

23/04/2026 2:39 PM

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM

BREAKING: ಬಿಕ್ಕಾಜಿ ಫುಡ್ಸ್ ಸಂಸ್ಥಾಪಕ ಶ್ರೀ ಶಿವ ರತನ್ ಅಗರ್ವಾಲ್ ನಿಧನ: ಭಾರತೀಯ ಲಘು ಆಹಾರ ಉದ್ಯಮದ ಧ್ರುವತಾರೆ ಅಸ್ತ

23/04/2026 2:25 PM

Viral : ತಮಿಳುನಾಡು ವಿಧಾನಸಭೆ ಚುನಾವಣೆ : ಮದುವೆ ಬೆನ್ನಲ್ಲೇ ಮತ ಚಲಾಯಿಸಿದ ನವ ವಧು-ವರರ ವಿಡಿಯೋ ವೈರಲ್ | WATCH VIDEO

23/04/2026 2:02 PM
State News
KARNATAKA

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ: ₹4.79 ಕೋಟಿ ಮೌಲ್ಯದ ಗಾಂಜಾ ವಶ

By kannadanewsnow0923/04/2026 2:39 PM KARNATAKA 1 Min Read

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ…

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM

ಮೊಸರು ಗಟ್ಟಿಯಾಗಿ ಹೆಪ್ಪುಗಟ್ಟಲು ಈ ಒಂದು ಎಲೆ ಸಾಕು: ಇಲ್ಲಿದೆ ಅದ್ಭುತ ಟ್ರಿಕ್ಸ್.!

23/04/2026 1:56 PM

ವಿದ್ಯಾರ್ಥಿಗಳೇ ಗಮನಿಸಿ : ‘SSLC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

23/04/2026 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.