ಹುಬ್ಬಳ್ಳಿ : ಈ ತಿಂಗಳ ಅಂತ್ಯದಲ್ಲಿ ಇಬ್ಬರು ST ಸೋಮಶೇಖರ್ ಹಾಗು ಶಿವರಾಂ ಹೆಬ್ಬಾರ್ ವಿರುದ್ಧ ಶಿಸ್ತು ಕ್ರಮ ಆಗುತ್ತದೆ. ಪಕ್ಷದ್ರೋಹ ಕೆಲಸ ಮಾಡಿದ ಇಬ್ಬರೂ ಶಾಸಕರು ವಿರುದ್ಧ ಶಿಸ್ತು ಕ್ರಮವಾಗುತ್ತದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿರುವ ಎಲ್ಲಾ ಗೊಂದಲಕ್ಕೆ ಈ ತಿಂಗಳ ಅಂತ್ಯಕ್ಕೆ ತೆರೆ ಬೀಳುತ್ತದೆ ವಿಧಾನಸಭೆ ಚುನಾವಣೆಯ ನಂತರ ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ನಿರಂತರವಾಗಿ ಪಕ್ಷದ್ರೋಹ ಕೆಲಸ ಮಾಡಿದ್ದಾರೆ. ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ಸಿನ ಡಿನ್ನರ್ ಪಾರ್ಟಿಗೆ ಹೋಗಿರುವ ವಿಚಾರ ದೊಡ್ಡದೇನು ಅಲ್ಲ. ಅದಕ್ಕಿಂತ ಹೆಚ್ಚಿನ ಪಕ್ಷ ವಿರೋಧಿ ಚಟುವಟಿಕೆ ಅವರಿಬ್ಬರು ಮಾಡಿದ್ದಾರೆ.
ಈ ಕುರಿತು ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಟೀಲ್ ಗೆ ಈ ಕುರಿತು ವರದಿ ಸಲ್ಲಿಕೆಯಾಗಿದ್ದು, ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದಂತಹ ವಿಡಿಯೋ ಪೇಪರ್ ಕಟಿಂಗ್ಗಳನ್ನು ವರದಿಯಲ್ಲಿ ಸಲ್ಲಿಸಲಾಗಿದೆ. ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಆದಷ್ಟು ಬೇಗ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ತಿಳಿಸಿದರು.