ಬೆಂಗಳೂರು: ರಾಜ್ಯದ ಐವರು ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. 72 ಗಂಟೆಯಲ್ಲಿ ಉತ್ತರಿಸುವಂತೆ ಐವರು ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ.
ಈ ಸಂಬಂಧ ಬಿಜೆಪಿಯ ಶಿಸ್ತು ಪಾಲನಾ ಸಮಿತಿಯಿಂದ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ. ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಪಿ ಹರೀಶ್, ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಗೆ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ.
ಬಿಜೆಪಿ ಶಿಸ್ತು ಪಾಲನಾ ಸಮಿತಿಯಿಂದ ನೀಡಿರುವಂತ ನೋಟಿಸ್ ನಲ್ಲಿ 72 ಗಂಟೆಯಲ್ಲಿ ಉತ್ತರಿಸುವಂತೆ ತಿಳಿಸಲಾಗಿದೆ. ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆನ್ನಲ್ಲೇ ಐವರು ಬಿಜೆಪಿ ನಾಯಕರಿಗೂ ಬಿಜೆಪಿ ಹೈಕಮಾಂಟ್ ನೋಟಿಸ್ ನೀಡಿ ಶಾಕ್ ನೀಡಲಾಗಿದೆ.
BREAKING: ಸಾಗರ ಉಪ ವಿಭಾಗಾಧಿಕಾರಿ ಯತೀಶ್.ಆರ್ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ