ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವರ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಕುರಿತಂತೆ ನಡೆದಂತ ಚರ್ಚೆಯು ಅಪೂರ್ಣಗೊಂಡಿದೆ. ಹೀಗಾಗಿ ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಿ ನಿರ್ಧಾರವನ್ನು ಕೈಗೊಳ್ಳೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನಾಳೆಯ ರಾಜ್ಯ ಬಜೆಟ್ ಅಧಿವೇಶನ ಸೇರಿದಂತೆ ಇತರೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯನ್ನು ನಡೆಸಲಾಯಿತು. ಅಲ್ಲದೇ ಎಸ್ಸಿ, ಎಸ್ಟಿ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆಯೂ ಚರ್ಚೆ ನಡೆಸಲಾಯಿತು.
ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತ ಚರ್ಚೆಯ ವೇಳೆಯಲ್ಲಿ ಸಹಮತವು ಸಂಪುಟದ ಸಹೋದ್ಯೋಗಿಗಳಲ್ಲಿ ಮೂಡಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಇಂದು ಕೂಡ ಎಸ್ಸಿ, ಎಸ್ಟಿ ಸಮುದಾಯದವರಿಗೆ ಒಳ ಮೀಸಲಾತಿ ಜಾರಿಯ ನಿರ್ಧಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಗಿಲ್ಲ.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಹಪಾಹಪಿಗೆ ಸಾರಿಗೆ ಇಲಾಖೆ ‘ICU’ ಸೇರಿದೆ: ಜೆಡಿಎಸ್ ಪಕ್ಷ ವಾಗ್ಧಾಳಿ
SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ








