ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಬಂಪರ್ ಕೊಡುಗೆ ನೀಡಿದ್ದು, ಕಾಂಗ್ರೆಸ್ ಎಲ್ಲ ಶಾಸಕರಿಗೆ ಅವರ ಕ್ಷೇತ್ರಗಳಿಗೆ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ. ಇದೇ ವಿಚಾರವಾಗಿ ಜುಲೈ 30 ಮತ್ತು 31 ರಂದು ವಿಧಾನಸೌಧದಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ. ಇನ್ನು ಕಾಂಗ್ರೆಸ್ ಶಾಸಕರಿಗೆ 50 ಕೋಟಿ ನೀಡಿದ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿದ್ದಾರೆ.
ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಅನುದಾನ ನೀಡಿರುವ ವಿಚಾರವಾಗಿ ಅದು ಮೊದಲೇ ನಿರ್ಧಾರ ಆಗಿತ್ತು. ಹಾಗಾಗಿ ಕಾಂಗ್ರೆಸ್ ಎಲ್ಲ ಶಾಸಕರಿಗೆ 50 ಕೋಟಿ ಅನುದಾನ ನೀಡುತ್ತಿದ್ದೇವೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ವಿಪಕ್ಷದವರಿಗೂ ಅನುದಾನ ಕೊಡುತ್ತೇವೆ ಗಾಬರಿಯಾಗೋದು ಬೇಡ ಮೊದಲು ಬಿಜೆಪಿಯವರು ಏನು ಮಾಡಿದ್ದಾರೆ ಅನ್ನೋದು ಮರೆತಿದ್ದಾರಾ? ಕನಕಪುರಕ್ಕೆ ವೈದ್ಯಕೀಯ ಕಾಲೇಜು ಕೊಟ್ಟು ನಂತರ ಕಿತ್ತುಕೊಂಡರು ಎಂದು ವಾಗ್ದಾಳಿ ನಡೆಸಿದರು.
ಈ ವಿಚಾರವಾಗಿ ಆರ್.ಅಶೋಕ್ ಅನುದಾನದ ವಿಚಾರದಲ್ಲೂ ಕಾಂಗ್ರೆಸ್ನವರು ತಾರತಮ್ಯ ಮಾಡಿದ್ದಾರೆ. ಈಗ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಶಾಸಕರಿಗೆ 25 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ನೀವು ಯಾವ ಮುಖ ಇಟ್ಕೊಂಡು ಕೇಂದ್ರದ ಬಗ್ಗೆ ಮಾತಾಡುತ್ತೀರಿ? ನೀವು ಕೊಡುವ ಅನುದಾನದಲ್ಲಿ ತಾರತಮ್ಯ ಮಾಡಿದ್ದೀರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲರಿಗೂ ಸಮನಾಗಿ ಅನುದಾನ ಬಿಡುಗಡೆ ಮಾಡಬೇಕು. ಶಾಸಕರ ಅನುದಾನದಲ್ಲೂ ತಾರತಮ್ಯ ಮಾಡಬೇಡಿ ಒಂದು ಕ್ಷೇತ್ರದ ಅಭಿವೃದ್ಧಿ ಮಾಡಿದರೆ ಸಾಲದು ರಾಜ್ಯ ಅಭಿವೃದ್ಧಿ ಆಗಬೇಕು ಎಂದು ಹೇಳಿಕೆ ನೀಡಿದರು.