ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆಗೆ ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಯನ್ನು ಇದೀಗ ಹೈಕೋರ್ಟ್ ವಿಚಾರಣೆ ನಡೆಸಿದೆ.
ಇಂದು ಈ ಪ್ರಕರಣದ ಕುರಿತಂತೆ ಹೈಕೋರ್ಟ್ ನಲ್ಲಿ, ನ್ಯಾ ಕೆ. ಸೋಮಶೇಖರ್ ನ್ಯಾ ಉಮೇಶ್ ಎಂ ಅಡಿಗರಿದ್ದ ಪೀಠದಲ್ಲಿ ವಿಚಾರಣೆ ನಡೆಸಲಾಯಿತು.ಸಿಬಿಐ ಪರ ವಿಶೇಷ ಅಭಿವೊಜಕ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದು, ಒಮ್ಮೆ ಸಿಬಿಐ ತನಿಖೆಗೆ ವಹಿಸಿದ ನಂತರ ಹಿಂಪಡೆಯುವಂತಿಲ್ಲ. ತನಿಖೆಗೆ ಸಮ್ಮತಿ ಪಡೆದ ಸರ್ಕಾರದ ಕ್ರಮ ಕಾನೂನುಬಾಹಿರವೆಂದು ವಾದಿಸಿದರು.
ಲೋಕಾಯುಕ್ತ ತನಿಖೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರ ವಕೀಲ ವೆಂಕಟೇಶ ದಳವಾಯಿ ಆಕ್ಷೇಪ ವ್ಯಕ್ತಪಡಿಸಿದ್ದು, ಡಿಕೆ ಶಿವಕುಮಾರ್ ಗೆ ಅನುಕೂಲವಾಗಲೆಂದೆ ಲೋಕಾಯುಕ್ತ ತನಿಖೆ ನಡೆಸಲಾಗುತ್ತದೆ ಹೀಗಾಗಿ ಸರ್ಕಾರದ ಆದೇಶವನ್ನು ರದ್ದು ಪಡಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರ ವಕೀಲ ವೆಂಕಟೇಶ್ ದಳವಾಯಿ ಮನವಿ ಮಾಡಿದರು.
ಈ ವೇಳೆ ವಾದವನ್ನು ಆಲಿಸಿದ ನ್ಯಾಯಪೀಠ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಪರ ವಾದ ಮಂಡನೆಗೆ ಅವರ ಪರ ವಕೀಲ ಕಪಿಲ್ ಸಿಬಲ್ ಕಾಲಾವಕಾಶ ಕೊರಿದರು.ಹೀಗಾಗಿ ಹೈಕೋಟ್ ಮೇ 27ಕ್ಕೆ ವಿಚಾರಣೆಯನ್ನು ಮುಂದೂಡಿತು.