ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಕುರಿತಂತೆ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ಕುರಿತಂತೆ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿ ಬಿ ಐ ತನಿಖೆಯನ್ನು ವಾಪಸ್ ತೆಗೆದುಕೊಂಡಿರುವ ಕುರಿತು ಸಿಬಿಐ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಕುರಿತಂತೆ ಹೈಕೋರ್ಟ್ ನಲ್ಲಿ ನ್ಯಾ. ಸೋಮಶೇಖರ್ ನ್ಯಾ ಉಮೇಶ್ ಅಡಿಗ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಸುತ್ತಿದ್ದು, ಸಿಬಿಐ ಪರ ವಿಶೇಷ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ತನಿಖೆಗೆ ಸಮ್ಮತಿ ಪಡೆದ ಸರ್ಕಾರದ ಕ್ರಮ ಕಾನೂನು ಬಾಹಿರವೆಂದು ಅವರು ವಾದ ಮಂಡಿಸಿದರು.
2020ರ ಅಕ್ಟೋಬರ್ ಮೂರರಿಂದಲೂ ಸಿಬಿಐ ತನಿಖೆ ಅರ್ಜಿ ವಿಚಾರಣೆ ನಡೆಯುತ್ತಿದೆ. ಈಗಲೂ ತನಿಖೆ ಪ್ರಗತಿಯಲ್ಲಿದೆ ಎಂದು ಸಿಬಿಐ ಪರ ವಕೀಲರ ವಾದವಾಗಿದೆ.ಕಾನೂನಿನಲ್ಲಿ ಅವಕಾಶವಿದೆಯೇ? ಸಿ ಆರ್ ಪಿ ಸಿ ಅಡಿ ತನಿಖೆಗೆ ಕಾಲಮಿತಿ ಇಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿದೆ. ವಾದವನ್ನು ಆಲಿಸಿದ ನಂತರ ಹೈಕೋರ್ಟ್ ಏಪ್ರಿಲ್ 18 ಕ್ಕೆ ಮುಂದೂಡಿದೆ.