ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಅನ್ನು ಸಿಬಿಐಗೆ ಕೊಟ್ಟಿದ್ದನ್ನು ಹಿಂಪಡೆದ ಸರ್ಕಾರದ ನಿರ್ಧಾರ ಬಗ್ಗೆ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ಈ ಮೂಲಕ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯ ಭವಿಷ್ಯ ನಿರ್ಧಾರವಾಗಲಿದೆ.
ರಾಜ್ಯ ಸರ್ಕಾರ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದಂತ ಆದೇಶವನ್ನು ಹಿಂಪಡೆಯಲಾಗಿತ್ತು. ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ ಗೆ ಪ್ರಶ್ನಿಸಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯ ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತ್ತು.
ನಾಳೆ ಸಿಬಿಐ ತನಿಖೆಯ ಭವಿಷ್ಯ ನಿರ್ಧಾರ ಕುರಿತಂತೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಿಂದ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ತೀರ್ಪು ಪ್ರಕಟಿಸಲಿದೆ. ಹೀಗಾಗಿ ಡಿಕೆ ಶಿವಕುಮಾರ್ ಗೆ ಶಾಕ್ ನೀಡುತ್ತೋ, ಅಥವಾ ರಿಲೀಫ್ ನೀಡುತ್ತೋ ಎಂಬುದನ್ನು ಕಾದು ನೋಡಬೇಕಿದೆ.
ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ರೋಬೋಟಿಕ್’ ಸೌಲಭ್ಯ | Government Hospital