ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ವಿಸ್ತೃತ ಪೀಠಕ್ಕೆ ವಹಿಸಿ ಆದೇಶಿಸಿದೆ.
ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಪೀಠದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠದ ಮುಂದೆ ಕಾನೂನು ದುರುಪಯೋಗವನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ ಎಂಬುದಾಗಿ ವಾದವನ್ನು ಮಂಡಿಸಲಾಯಿತು.
ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದೊಂದು ಗಂಭೀರ ಪ್ರಕರಣವಾಗಿದ್ದು, ಡಿಕೆ ಶಿವುಕಮಾರ್ ಪ್ರಕರಣವನ್ನು ವಿಸ್ತೃತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸೋದಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿಗೊಳಿಸಿದೆ.
BIG NEWS: ‘ಇಂದಿರಾ ಕ್ಯಾಂಟೀನ್’, ಶಾಲಾ ಬಿಸಿಯೂಟದಲ್ಲಿ ‘ಸಿರಿಧಾನ್ಯ’ ಬಳಕೆ- CM ಸಿದ್ದರಾಮಯ್ಯ ಘೋಷಣೆ