ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದಿಗ ಸುಪ್ರೀಂ ಕೋರ್ಟಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇತ್ತೀಚಿಗೆ ಹೈಕೋರ್ಟ್ ನಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ-ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು ಎಂದು ಹೇಳಿ ಅರ್ಜಿ ವಜಾ ಗೊಳಿಸಿತ್ತು. ಇದೀಗ ಶಾಸಕ ಬಸನಗೌಡ ಪಾಟೀಲ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಹೈಕೋರ್ಟ್ ವಿಭಾಗಿಯ ಪೀಠ ಹೇಳಿದ್ದೇನು?
ರಾಜ್ಯ ಸರ್ಕಾರ – ಸಿಬಿಐ ನಡುವಿನ ವಾದವನ್ನು ಸುಪ್ರೀಂಕೋರ್ಟ್ ಪರಿಗಣಿಸಬೇಕು. ಈ ಹಿನ್ನೆಲೆ ಈ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುವುದು ಸೂಕ್ತ ಎಂದು ಕರ್ನಾಟಕ ಹೈ ಕೋರ್ಟ್ ನ ವಿಭಾಗೀಯ ಪೀಠ ಅಭಿಪ್ರಾಯ ಪಟ್ಟಿದೆ.
ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್ ಅಡಿಗ ಅವರನ್ನೊಳಗೊಂಡ ವಿಭಾಗೀಯ ಪೀಠವು ಶಿವಕುಮಾರ್ ಅವರ ಅಕ್ರಮ ಆಸ್ತಿಗಳ ತನಿಖೆಗೆ ಒಪ್ಪಿಗೆಯನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರದ ನವೆಂಬರ್ 28, 2023 ರ ನಿರ್ಧಾರದ ಸಿಬಿಐ ಅರ್ಜಿಯನ್ನು ವಜಾ ಮಾಡಿದೆ. 67 ಪುಟಗಳ ತೀರ್ಪಿನಲ್ಲಿ, ಅರ್ಜಿಗಳಲ್ಲಿ ಪ್ರಸ್ತಾಪಿಸಲಾದ ವಿಷಯಗಳನ್ನು ಸುಪ್ರೀಂ ಕೋರ್ಟ್ ತಿಳಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಪ್ರಕರಣದ ಹಿನ್ನೆಲೆ?
2019ರಲ್ಲಿ ಬಿಜೆಪಿ ಸರಕಾರವು ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಅನುಮತಿ ನೀಡಿತ್ತು. ಅದನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಆನಂತರ ಅವರು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನ. 28ರಂದು ಹಿಂಪಡೆದಿತ್ತು.
ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹಾಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದಕ್ಕೆ ಆಕ್ಷೇಪಿಸಿ, ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಇತ್ತೀಚಿಗೆ ಡಿಕೆ ಶಿವಕುಮಾರ್ ವಿರುದ್ಧ ಯತ್ನಲ್ ಸಲ್ಲಿಸಿದ ಅರ್ಜಿಯನ್ನು ಉಚ್ಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಜಾ ಗೊಳಿಸಿತ್ತು ಈ ಹಿನ್ನೆಲೆಯಲ್ಲಿ ಇದೀಗ ಬಸನಗೌಡ ಪಾಟೀಲ ಯತ್ನಾಳ್, ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.