ಬೆಂಗಳೂರು: ದಿವಂಗತ ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಅವರ ಒಡವೆಗಳನ್ನು ಜಪ್ತಿ ಮಾಡಲಾಗಿತ್ತು. ಈ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವುದಕ್ಕೂ ಹೈಕೋರ್ಟ್ ಆದೇಶಿಸಿತ್ತು. ಆದ್ರೇ ಇದೀಗ ಇದಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ವಿಧಿಸಿದೆ.
ದಿ.ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜಪ್ತಿ ಮಾಡಲಾಗಿದ್ದಂತ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಮಾರ್ಚ್.5, 6ರೊಳೆಗೆ ಹಿಂದಿರುಗಿಸುವಂತೆ ಹೈಕೋರ್ಟ್ ಸೂಚಿಸಿತ್ತು.
ಈ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿಯನ್ನು ಸಲ್ಲಿಸಿದ್ದಂತ ಜಯಲಲಿತಾ ವಾರಸುದಾರೆ ಜೆ.ದೀಪಾ ಅವರ ಪರ ವಕೀಲರು, ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆಯಾಗಿದೆ ಎಂಬುದಾಗಿ ಕೋರಿದ್ದರು.
ಈ ವಾದವನ್ನು ಪರಿಗಣಿಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಜಯಲಲಿತಾ ಅವರ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದುರಿಗಿಸುವ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.
ಸಂದೇಶಶಾಲಿ ಹಿಂಸಾಚಾರ: NWC ಮುಖ್ಯಸ್ಥರಿಂದ ಮುರ್ಮು ಭೇಟಿ, ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು
Watch Video: ‘ಬರಗಾಲ’ದಲ್ಲೂ ಖುಲಾಯಿಸಿದ ‘ರೈತ’ನ ಅದೃಷ್ಠ: ‘ಬೇಸಿಗೆ’ಯಲ್ಲೂ ಬೋರಲ್ಲಿ 45 ಅಡಿಗೆ ‘2.5 ಇಂಚು’ ನೀರು