ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಅಧ್ಯಕ್ಷರ ಸ್ಥಾನದಿಂದ ಡಾ.ಪುಷ್ಪಾ ಅಮರನಾಥ್ ಅವರನ್ನು ಕೆಳಗಿಳಿಸುವಂತೆ ಮಹಿಳಾ ಕಾರ್ಯಕರ್ತರೇ ಆಗ್ರಹಿಸಿದ್ದಾರೆ.
BIGG NEWS: ಆನೇಕಲ್ ನಲ್ಲಿ ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ್ದಕ್ಕೆ ಯುವಕ ಆತ್ಮಹತ್ಯೆ
ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪುಷ್ಪಾ ಅಮರನಾಥ್ ವಿರುದ್ಧ ಪೋಸ್ಟರ್ ಹಿಡಿದು ಬಂದ ಮಹಿಳಾ ಕಾರ್ಯಕರ್ತರು ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಪಟ್ಟು ಹಿಡಿದಿದ್ದಾರೆ. ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರಾಮಾಣಿಕರಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.ಪುಷ್ಪಾ ಅಮರನಾಥ್ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಅಧ್ಯಕ್ಷರನ್ನ ಬದಲಾಯಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೂ ಈ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಅವರನ್ನು ವಜಾಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.