ಬೆಂಗಳೂರು : ಮೃತರ ಕುಟುಂಬಗಳಿಗೆ ವಾರಸಾ ಪ್ರಮಾಣ ಪತ್ರ, ಪಹಣಿ ಪತ್ರ, ಹಕ್ಕು ಬದಲಾವಣೆ ದಾಖಲೆಗಳನ್ನು ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಶೀಘ್ರದಲ್ಲೇ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಸುಮಾರು 66,000 ಮೃತರ ಕುಟುಂಬಗಳಿಗೆ ಪೌತಿ ಆಂದೋಲನದ ಮೂಲಕ ವಾರಸಾ ಪ್ರಮಾಣ ಪತ್ರ, ಪಹಣಿ ಪತ್ರ, ಹಕ್ಕು ಬದಲಾವಣೆ ದಾಖಲೆಗಳನ್ನು ಅವರ ಮನೆಯ ಬಾಗಿಲಿಗೆ ಒದಗಿಸುವ ಐತಿಹಾಸಿಕ ಕಾರ್ಯಕ್ರಮಕ್ಕೆ ಕ್ಷೇತ್ರ ಸಾಕ್ಷಿಯಾಗಲಿದೆ ಎಂದು ತಿಳಿಸಲು ಹರ್ಷಿತಳಾಗಿದ್ದೇನೆ ಎಂದು ತಿಳಿಸಿದ್ದಾರೆ.
