ಬೆಂಗಳೂರು : 2025-26ನೇ ಸಾಲಿನಲ್ಲಿ KMERC ಇಲಾಖೆಯ CEPMIZ Project ಆರ್ಥಿಕ ಅನುದಾನದಡಿ ರಾಜ್ಯದ ನಾಲ್ಕು ಜಿಲ್ಲೆಗಳ 10 ಗಣಿಬಾಧಿತ ತಾಲ್ಲೂಕುಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು ಸುಗಮವಾಗಿ ಅನುಷ್ಠಾನಗೊಳಿಸಲು SOP ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2025-26 ನೇ ಸಾಲಿನಲ್ಲಿ, ರಾಜ್ಯದ 4 ಜಿಲ್ಲೆಗಳ ಒಟ್ಟು 10 ಗಣಿಬಾಧಿತ ತಾಲ್ಲೂಕುಗಳ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹು ಪೋಷಕಾಂಶಗಳ ನ್ಯೂನ್ಯತೆಗಳಿಂದ ಉಂಟಾಗುತ್ತಿರುವ ಅನಾರೋಗ್ಯಕರ ಪರಿಸ್ಥಿತಿಯನ್ನು ನಿವಾರಿಸಿ ಗಣಿಬಾಧಿತ ಪ್ರದೇಶದ ವಿದ್ಯಾರ್ಥಿಗಳ ಆರೋಗ್ಯ ಮತ್ತು ಬೆಳವಣಿಗೆಯ ಗುಣಮಟ್ಟವನ್ನು ಸುಧಾರಿಸಿ, ಶೈಕ್ಷಣಿವಾಗಿ ಅಭಿವೃದ್ಧಿ ಹೊಂದಲು KMERC ಇಲಾಖೆಯ CEPMIZ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವನ್ನು (SNF) ಒದಗಿಸಲು ಯೋಜಿಸಲಾಗಿದೆ.
2025-26ನೇ ಸಾಲಿನಲ್ಲಿ KMERC ಇಲಾಖೆಯ CEPMIZ Project ನ ಆರ್ಥಿಕ ಅನುದಾನದಡಿ ಗಣಿಬಾಧಿತ ತಾಲ್ಲೂಕುಗಳಾದ ಬಳ್ಳಾರಿ ಜಿಲ್ಲೆಯ ಬಳ್ಳಾರಿ ಮತ್ತು ಸಂಡೂರು, ವಿಜಯನಗರ ಜಿಲ್ಲೆಯ ಹೊಸಪೇಟೆ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಗುಬ್ಬಿ ಮತ್ತು ತಿಪಟೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ ಮತ್ತು ಮೊಳಕಾಲ್ಮರು ತಾಲ್ಲೂಕುಗಳಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆಯ ಯೋಜನೆಯನ್ನು ಅನುಷ್ಠಾನಗೊಳಿಸಲು ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯ ನೇಮಿತ ಮೇಲ್ವಿಚಾರಣಾ ಪ್ರಾಧಿಕಾರದಿಂದ ದಿನಾಂಕ: 03. 10. 2025 ರಂದು ನೀಡಿದ ಆದೇಶದಂತೆ 10 Detailed Project Report (DPR) ಗಳನ್ನು KMERC ಸಂಸ್ಥೆಗೆ ಸಲ್ಲಿಸಿ ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿದೆ (ಉಲ್ಲೇಖ 1). ಈ ಗಣಿಬಾಧಿತ ತಾಲ್ಲೂಕುಗಳ ವ್ಯಾಪ್ತಿಯಲ್ಲಿರುವ ಒಟ್ಟು 2680 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ನಡೆಯುತ್ತಿದ್ದು, 1 ರಿಂದ 10ನೇ ತರಗತಿಯ ಒಟ್ಟು 222610 ವಿದ್ಯಾರ್ಥಿಗಳು ಫಲಾನುಭವಿಗಳಾಗಿ ಯೋಜನೆಯ ವ್ಯಾಪ್ತಿಯಲ್ಲಿ ಗುರುತಿಸಲಾಗಿದೆ.









