ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 44525 ಶಾಲೆಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ನಮ್ಮ ರಕ್ತದಲ್ಲಿ ಕನ್ನಡವಿದೆ. ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. 2025 – 26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
ನಮ್ಮ ರಕ್ತದಲ್ಲಿ ಕನ್ನಡವಿದೆ. ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. 2025 – 26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು.
ನಾವು… pic.twitter.com/xRNaZDiuhB
— DIPR Karnataka (@KarnatakaVarthe) December 8, 2025
ರಾಜ್ಯದಲ್ಲಿನ 44,525 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ₹111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.
– ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ಉತ್ತರ… pic.twitter.com/f3HswYnuYN
— DIPR Karnataka (@KarnatakaVarthe) December 8, 2025








