ಮೈಸೂರು: ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಆರೋಪ ಕುರಿತು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಪತ್ರಿಕಾ ಪ್ರಕಟಣೆ ಮೂಲಕ ದಾಖಲೆ ಸಮೇತ ಸ್ಪಷ್ಟನೆ ನೀಡಿದ್ದಾರೆ.
BIGG NEWS: ಸಸ್ಯಾಹಾರಿ ಎಂಬ ಕಾರಣಕ್ಕೆ ವ್ಯಕ್ತಿಯ ಮೆಡಿಕ್ಲೈಮ್ ರದ್ದು…!
‘ಮೈಸೂರು ಜಿಲ್ಲೆಯಲ್ಲಿ ಲಕ್ಷಾಂತರ ಮತದಾರರನ್ನು ಅಕ್ರಮವಾಗಿ ಕೈಬಿಡಲಾಗಿದೆ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆರೋಪ ಮಾಡಿದ್ದರು. ಈ ಬಗ್ಗೆ ದಾಖಲೆಗಳ ಸಮೇತ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ, ಒಟ್ಟು 1.20 ಲಕ್ಷ ಮತದಾರರ ಹೆಸರುಗಳನ್ನು ಕಾನೂನಾತ್ಮಕವಾಗಿಯೇ ಕೈ ಬಿಡಲಾಗಿದೆ. ಈ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆದು ಮಾಹಿತಿಯನ್ನೂ ನೀಡಲಾಗಿದೆ ಎಂದು ಹೇಳಿದ್ದಾರೆ.
BIGG NEWS: ಸಸ್ಯಾಹಾರಿ ಎಂಬ ಕಾರಣಕ್ಕೆ ವ್ಯಕ್ತಿಯ ಮೆಡಿಕ್ಲೈಮ್ ರದ್ದು…!
ಸ್ಥಳ ಪರಿಶೀಲನೆ ನಡೆಸಿದ ಬೂತ್ ಮಟ್ಟದ ಅಧಿಕಾರಿಗಳ ವರದಿ ಆಧಾರಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲ ಪ್ರಕ್ರಿಯೆಗಳು ಪಾರದರ್ಶಕವಾಗಿಯೇ ನಡೆದಿವೆ. ಮರಣ ಹೊಂದಿದ, ಸ್ಥಳಾಂತರವಾದ ಹಾಗೂ ಒಂದೇ ರೀತಿಯ ಭಾವಚಿತ್ರ ಹಾಗೂ ಪುನರಾವರ್ತಿತ ಮತದಾರರನ್ನು ಕೈ ಬಿಡಲಾಗಿದೆ. 11 ಕ್ಷೇತ್ರದ ಮತದಾರರ ಪಟ್ಟಿಯಿಂದಲೂ ಇಂಥವರ ಹೆಸರುಗಳನ್ನು ಕೈಬಿಡಲಾಗಿದೆ.