ಕಲಬುರ್ಗಿ: ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಹೀಗಾಗಿ ನವೆಂಬರ್.16ರಂದು ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಅವಕಾಶ ಸಿಕ್ಕಂತೆ ಆಗಿದೆ.
ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಕೇವಲ 300 ಕಾರ್ಯಕರ್ತರ ಪಥಸಂಚಲನಕ್ಕೆ ಸರ್ಕಾರದಿಂದ ಅನುಮತಿ ನೀಡಲಾಗಿದೆ.
ಈ ಕುರಿತು ಕಲಬುರ್ಗಿ ಹೈಕೋರ್ಟ್ ಪೀಠಕ್ಕೆ ಎಜಿ ಶಶಿಕಿರಣ್ ಶೆಟ್ಟಿ ಕೂಡ ಮಾಹಿತಿ ನೀಡಿದ್ದಾರೆ. 800 ಜನರಿಗೆ ಅನುಮತಿ ಕೇಳಲಾಗಿತ್ತು. ಆದರೇ 300 ಜನರಿಗೆ ಅನುಮತಿ ನೀಡಲಾಗಿದೆ. 800 ಜನರಿಗೆ ಅನುಮತಿ ನೀಡಲು ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದ್ದಾರೆ. ಆದರೇ ಸರ್ಕಾರವು 300 ಕಾರ್ಯಕರ್ತರು 25 ಬ್ಯಾಂಡ್ ವಾದಕರಿಗೆ ಅನುಮತಿ ನೀಡಿದೆ ಎಂಬುದಾಗಿ ಹೇಳಿದರು.
ಕೆಲವೆಡೆ 100 ರಿಂದ 150 ಜನರ ಪಥಸಂಚಲನ ನಡೆಸಲಾಗಿದೆ. ಎಲ್ಲಾ ಅಂಶಗಳನ್ನು ಪರಿಗಣಿಸಲಾಗಿದೆ ಎಂಬುದಾಗಿ ಎಜಿ ಶಶಿಕಿರಣ್ ಶೆಟ್ಟಿ ನ್ಯಾಯಪೀಠದ ಗಮನಕ್ಕೆ ತಂದರು. ಈ ವೇಳೆ ಬ್ಯಾಂಡ್ ವಾದಕರ ಸಂಖ್ಯೆ 50ಕ್ಕೆ ಏರಿಸಲು ಹೈಕೋರ್ಟ್ ಸೂಚಿಸಿತು.
‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ








