ಬಳ್ಳಾರಿ: ಜಿಲ್ಲೆಯ ಎಲ್ಲಾ ರೈತರು ತಪ್ಪದೇ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯ ಪರಿಣಾಮಕಾರಿ ಅನುಷ್ಟಾನದ ಕುರಿತು ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲಿ ಕೃಷಿ ಚಟುವಟಿಕೆಗಳು ಬರದಿಂದ ಸಾಗುತ್ತಿವೆ. ಎಲ್ಲಾ ಅಧಿಕಾರಿಗಳು ಜಿಲ್ಲೆಯಲ್ಲಿ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಯೋಜನೆಯಡಿ ರೈತರನ್ನು ನೋಂದಾಯಿಸಿಕೊಳ್ಳುವAತೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಸೂಚಿಸಿದರು.
ಜಿಲ್ಲೆಯ ಎಲ್ಲಾ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಲಾದ ವಿವಿಧ ಬೆಳೆಗಳಿಗೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬೆಳೆ ವಿಮೆಗೆ ನೋಂದಾಯಿಸಲು ಎಲ್ಲಾ ರೈತರು ಅದರಲ್ಲಿ ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಅರ್ಹರಿದ್ದು, ತಮ್ಮ ಹತ್ತಿರದ ಸ್ಥಳೀಯ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮಒನ್ ಸೇವಾ ಕೇಂದ್ರಗಳಲ್ಲಿ ಬೆಳೆ ವಿಮೆ ಮಾಡಿಸಬಹುದು ಎಂದರು.
ಜAಟಿ ಕೃಷಿ ನಿರ್ದೇಶಕ ಡಾ.ಕೆ.ಸೋಮಸುಂದರ್ ಅವರು ಮಾತನಾಡಿ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆಗಳಾದ ಭತ್ತ, ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಆ.16 ಕೊನೆಯ ದಿನವಾಗಿದ್ದು, ಎಲ್ಲಾ ರೈತರು ಹೆಚ್ಚಿನ ಪ್ರಮಾಣದಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ತಾಲ್ಲೂಕು ಕೃಷಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕೃಷಿ ಉಪನಿರ್ದೇಶಕ ಕೆಂಗೇಗೌಡ, ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಸೇರಿದಂತೆ ತಾಲ್ಲೂಕು ಮಟ್ಟದ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು