ಬೆಂಗಳೂರು: ಮಾ. 27 ರಂದು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆಯನ್ನು ದೆಹಲಿಯಲ್ಲಿ ಕರೆಯಲಾಗಿದೆ. ಅಂದು ನಾನು ಸಹ ಸಭೆಯಲ್ಲಿ ಭಾಗವಹಿಸಲಿದ್ದೇನೆ. ಇದಕ್ಕೆ ನಾನು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಮಾ. 28 ಕ್ಕೆ ಅಹಮದಾಬಾದಿನ ಸಬರಮತಿ ಆಶ್ರಮದ ಬಳಿ ಎಐಸಿಸಿ ಸದಸ್ಯರ ಸಭೆಗೆ ಆಹ್ವಾನ ನೀಡಿದ್ದಾರೆ. ಹಿರಿಯ ನಾಯಕರು, ಸಂಸದರು ಅಲ್ಲಿಗೆ ಹೋಗುತ್ತಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದೀರಾ ಎಂದಾಗ, “ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯುತ್ತಿರುವ ಕಾರಣಕ್ಕೆ ಭೇಟಿ ಸಾಧ್ಯವಾಗಿಲ್ಲ ಎಂದರು.
ದೆಹಲಿಗೆ ಬಂದರೂ ಸಂಜೆಯ ತನಕ ಕಾಣಿಸಿಕೊಳ್ಳದ ನೀವು ನಿಗೂಢವಾಗಿ ಭೇಟಿ ಮಾಡಿದ್ದೀರಾ ಎಂದು ಕೇಳಿದಾಗ, ಯಾವ ನಿಗೂಢತೆಯೂ ಇಲ್ಲ. ಎಲ್ಲಿಗೆ ಹೋಗಬೇಕಿತ್ತೊ ಅಲ್ಲಿಗೆ ಹೋಗಿದ್ದೆ. ಈಗ ಮನೆಯಿಂದ ಬರುತ್ತಿರುವೆ ಎಂದು ಹೇಳಿದರು.
ಒಳಮೀಸಲಾತಿ ಜಾರಿಗೆ ನಮ್ಮ ಪಕ್ಷ ಬದ್ಧವಾಗಿದೆ
ಒಳ ಮೀಸಲಾತಿ ವಿಚಾರವಾಗಿ ನಾಯಕರ ಸಭೆ ಬಗ್ಗೆ ಪ್ರಶ್ನಿಸಿದಾಗ “ಒಳಮೀಸಲಾತಿ ವಿಚಾರವಾಗಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿಗೆ ನಾವು ಬದ್ಧವಾಗಿದ್ದೇವೆ. ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಸಮುದಾಯದವರು ತಮ್ಮ, ತಮ್ಮಲ್ಲಿಯೇ ಮಾತನಾಡಿ ರಾಜಿ ಮಾಡಿಕೊಳ್ಳಿ ಎಂದು ಹೇಳಲಾಗಿತ್ತು. ಆದ ಕಾರಣ ಸಭೆ ಮಾಡಿದ್ದಾರೆ. ಬೋವಿಗಳು, ಲಂಬಾಣಿ, ಕೊರಮ, ಕೊರಚ, ಎಡಗೈ, ಬಲಗೈಗೆ ಸೇರಿದ ಸಮುದಾಯಗಳಿವೆ ಅವರೆಲ್ಲಾ ಸೇರಿ ಒಂದು ತೀರ್ಮಾನಕ್ಕೆ ಬಂದರೆ ಸಂತೋಷ” ಎಂದರು.
ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು
ಅಲ್ಪಸಂಖ್ಯಾತರ ಗುತ್ತಿಗೆ ಮೀಸಲು ವಿಚಾರವಾಗಿ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ಕುವೆಂಪು ಅವರ ಹಾಡನ್ನು ನಾವು ನಾಡಗೀತೆ ಮಾಡಿಕೊಂಡಿದ್ದೇವೆ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ. ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಎಲ್ಲರೂ ಮೇಲಕ್ಕೆ ಬರಬೇಕು. ಪರಿಶಿಷ್ಟ ಜಾತಿಯವರಿಗು ಕೂಡ ಗುತ್ತಿಗೆ ಮೀಸಲಾತಿ ನೀಡಿದ್ದೇವೆ. ಇದೇ ರೀತಿ ಇವರಿಗೂ ಕೊಟ್ಟಿದ್ದೇವೆ. ಸಣ್ಣಪುಟ್ಟ ಕೆಲಸ ಮಾಡಿಕೊಳ್ಳುತ್ತಾರೆ” ಎಂದರು.
ನಾನು, ಸಿದ್ದರಾಮಯ್ಯ ‘ದ್ವೇಷ ರಾಜಕಾರಣ’ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ
ಮುಸಲ್ಮಾನರಿಗೆ ಮೀಸಲಾತಿ ವಿರೋಧಿಸಿ ಬಿಜೆಪಿಯಿಂದ ತೀವ್ರ ಹೋರಾಟ: ಬಿವೈ ವಿಜಯೇಂದ್ರ