ಬೆಳಗಾವಿ: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವಾಗ ಎನ್ನುವುದೇ ಬಹುತೇಕರ ಕುತೂಹಲವಾಗಿದೆ. ಇದಕ್ಕೆ ರಾಜ್ಯ ಚುನಾವಣಾ ಆಯುಕ್ತರು ತೆರೆ ಎಳೆದಿದ್ದಾರೆ. ಏಪ್ರಿಲ್ ಒಳಗೆ ಎಲೆಕ್ಷನ್ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಡಿಸಿ ಕಚೇರಿಗೆ ಭೇಟಿ ನೀಡುತ್ತಿದ್ದೇನೆ. ಮತದಾರರ ಪಟ್ಟಿ ಲಭ್ಯವಾದ ತಕ್ಷಣ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸುವುದಾಗಿ ತಿಳಿಸಿದರು.
ಇನ್ನೂ ಚುನಾವಣಾ ಆಯೋಗಕ್ಕೆ ಮೀಸಲಾತಿ ಪಟ್ಟಿ ಕೊಟ್ಟ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಪ್ರವೃತ್ತರಾಗಲಿದ್ದೇವೆ. ಎಲ್ಲಿ ಹೋದ್ರೂ ಜನರು ಚುನಾವಣೆ ಯಾವಾಗ ಅಂತ ಕೇಳುತ್ತಿದ್ದಾರೆ ಎಂದರು.
ಏಪ್ರಿಲ್ ಒಳಗೆ ಚುನಾವಣೆ ನಡೆಸಿ ಅಧಿಕಾರ ಕೊಡಬೇಕೆಂದು ಕೊಂಡಿದ್ದೇವೆ ಎಂಬುದಾಗಿ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಚುನಾವಣಾ ಆಯೋಗ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಮೀಸಲಾತಿ ಪಟ್ಟಿ ಕೈಸೇರುತ್ತಿದ್ದಂತೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಏಪ್ರಿಲ್ ಒಳಗೆ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆ ಮುಗಿಸುತ್ತೇವೆ. ಏಪ್ರಿಲ್ ಮೇಲೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡುತ್ತೇವೆ ಎಂದರು.