Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇವಲ ವಾಟ್ಸಾಪ್ ಚಾಟ್ ಆಧಾರದ ಮೇಲೆ `ವಿಚ್ಛೇದನ’ ನೀಡಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
KARNATAKA

ಕೇವಲ ವಾಟ್ಸಾಪ್ ಚಾಟ್ ಆಧಾರದ ಮೇಲೆ `ವಿಚ್ಛೇದನ’ ನೀಡಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow57

ಮುಂಬೈ: ಸಂಗಾತಿಗೆ ತನ್ನ ವಾದ ಮಂಡಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆ, ಕೇವಲ ವಾಟ್ಸಾಪ್ ಚಾಟ್‌ಗಳಲ್ಲಿನ ಸಂಭಾಷಣೆಯನ್ನು ಆಧರಿಸಿ ಕ್ರೌರ್ಯದ ಆರೋಪ ಹೊರಿಸಿ ವಿಚ್ಛೇದನ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ:

ನಾಸಿಕ್ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು ಈ ಹಿಂದೆ ನೀಡಿದ್ದ ವಿಚ್ಛೇದನ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜೂಷಾ ದೇಶಪಾಂಡೆ ಅವರ ಪೀಠವು ಈ ನಿರ್ಧಾರ ಪ್ರಕಟಿಸಿದೆ.

ಏನಿದು ಘಟನೆ?

ವ್ಯಕ್ತಿಯೊಬ್ಬರು ತನ್ನ ಪತ್ನಿಯ ವಿರುದ್ಧ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. “ನನ್ನ ಪತ್ನಿ ನಾಸಿಕ್‌ನಿಂದ ಪುಣೆಗೆ ಸ್ಥಳಾಂತರಗೊಂಡು ಪ್ರತ್ಯೇಕವಾಗಿ ವಾಸಿಸಬೇಕು ಎಂದು ಒತ್ತಾಯಿಸುತ್ತಿದ್ದಾಳೆ. ಅಲ್ಲದೆ ವಾಟ್ಸಾಪ್ ಚಾಟ್‌ ಗಳಲ್ಲಿ ನನ್ನ ತಾಯಿ ಮತ್ತು ತಂಗಿಯ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾಳೆ. ಬೆದರಿಕೆ ತಂತ್ರಗಳು, ಭಾವನಾತ್ಮಕ ಬ್ಲ್ಯಾಕ್‌ಮೇಲ್ ಮತ್ತು ಅಸಭ್ಯ ಭಾಷೆಯನ್ನು ಬಳಸಿದ್ದಾಳೆ” ಎಂದು ಆರೋಪಿಸಿದ್ದರು.

ಈ ಆರೋಪಗಳನ್ನು ಪುರಸ್ಕರಿಸಿದ್ದ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ಅಭಿಮತ:
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಕೇವಲ ವಾಟ್ಸಾಪ್ ಚಾಟ್‌ಗಳನ್ನು ಸಾಕ್ಷ್ಯವಾಗಿ ಪರಿಗಣಿಸಿ ವಿಚ್ಛೇದನ ನೀಡಲಾಗದು ಎಂದು ಸ್ಪಷ್ಟಪಡಿಸಿದೆ. “ವಾಟ್ಸಾಪ್ ಚಾಟ್‌ ಗಳನ್ನು ಕಾನೂನುಬದ್ಧವಾಗಿ ಸಾಕ್ಷ್ಯಗಳ ಮೂಲಕ ಸಾಬೀತುಪಡಿಸಲಾಗಿಲ್ಲ. ಅಲ್ಲದೆ, ಎದುರು ಪಾರ್ಟಿಗೆ ತನ್ನ ಸಮರ್ಥನೆ ನೀಡಲು ಸೂಕ್ತ ಅವಕಾಶ ನೀಡದೆ ಇಂತಹ ತೀರ್ಪು ನೀಡುವುದು ಸರಿಯಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

'Divorce' cannot be granted based on WhatsApp chat alone: ​​High Court's landmark verdict
Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.