ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆರಂಭದಿಂದ ಅಂತ್ಯದವರೆಗೂ ಜಿಲ್ಲೆಯಾಧ್ಯಂತ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗುಲಾಂ ನಬಿ ಅಜಾದ್ ರಾಜೀನಾಮೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ.?
ಈ ಸಂಬಂಧ ಆದೇಶ ಹೊರಡಿಸಿರುವಂತ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿಯವರು, ದಿನಾಂಕ 31-08-2022ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತ್ರ ವಿವಿಧ ದಿನಗಳಂದು ವಿಸರ್ಜನೆ ಹಮ್ಮಿಕೊಳ್ಳಲಾಗುತ್ತದೆ. ಶಿವಮೊಗ್ಗ ಜಿಲ್ಲೆಯಾಧ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಂಬಂಧ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆ ಉಂಟಾಗಲಿದೆ ಎಂದಿದ್ದಾರೆ.
ಇದಲ್ಲದೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರೋದರಿಂದ, ಸಾರ್ವಜನಿಕರ ಶಾಂತಿ, ಸೌಹಾರ್ದತೆ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ದಿನಾಂಕ 31-08-2022ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾಧ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಆದೇಶಿಸಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ